ಮಹಾರಾಷ್ಟ್ರ ಬಸ್ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ

ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಗೆ ಬೆಂಕಿ ತಗುಲಿ 25 ಮಂದಿ ಸಜೀವ ದಹನವಾಗಿದ್ದು, ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಿಂದ ತೀವ್ರ ದುಃಖಿತನಾಗಿದ್ದೇನೆ. ಮೃತಪಟ್ಟವರ ಕುಟುಂಬಕ್ಕೆ ದುಃಖವನ್ನ ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ. ಗಾಯಾಳುಗಳು ಬೇಗ ಗುಣಮುಖರಾಗಲಿ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ನೀಡುತ್ತೇವೆ, ಗಾಯಗೊಂಡವರಿಗೆ 50 ಸಾವಿರ ಪರಿಹಾರ ನೀಡುತ್ತೇವೆ. ಮಹಾರಾಷ್ಟ್ರ ಸರ್ಕಾರ ಕೂಡ ಪರಿಹಾರ ಘೋಷಿಸಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡಲಾಗುತ್ತದೆ, ಅಪಘಾತದಲ್ಲಿ ಗಾಯಗೊಂಡವರಿಗೆ ಸರ್ಕಾರವೇ ಚಿಕಿತ್ಸಾ ವೆಚ್ಚ ಭರಿಸಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಘೋಷಣೆ ಮಾಡಿದ್ದಾರೆ.

ಬಸ್ನಲ್ಲಿ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದು, ಈ ಪೈಕಿ 25 ಮಂದಿ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿದ್ದಾರೆ. ಬಸ್ನ ಚಾಲಕ ಕೂಡ ಬದುಕುಳಿದಿದ್ದು, ಬಸ್ ನ ಟಯರ್ ಸ್ಪೋಟಗೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ. ನಂತರ ಬಸ್ ಗೆ ಬೆಂಕಿ ಹೊತ್ತಿಕೊಂಡು 25 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

https://twitter.com/PMOIndia/status/1674987292409335808?ref_src=twsrc%5Etfw%7Ctwcamp%5Etweetembed%7Ctwterm%5E1674987292409335808%7Ctwgr%5E7e584fb3bc04d1ebc400113e13a705a1d5841fdc%7Ctwcon%5Es1_&ref_url=https%3A%2F%2Ftv9kannada.com%2Fnational%2Fbus-accident-terrible-bus-accident-in-maharashtra-prime-minister-modi-announced-compensation-of-rs-2-lakh-to-the-families-of-the-deceased-and-rs-50000-to-the-injured-national-news-akp-613270.html

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read