HomeKarnatakaಮಹಾಶಿವರಾತ್ರಿ: ಕುಟುಂಬ ಸಮೇತ ತ್ರಿನೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಾಜವಂಶಸ್ಥ ಯದುವೀರ್ ಒಡೆಯರ್

ಮಹಾಶಿವರಾತ್ರಿ: ಕುಟುಂಬ ಸಮೇತ ತ್ರಿನೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಾಜವಂಶಸ್ಥ ಯದುವೀರ್ ಒಡೆಯರ್

ಮೈಸೂರು: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ರಾಜವಂಶಸ್ಥ, ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಕುಟುಂಬ ಸಮೇತರಾಗಿ ತ್ರಿನೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆಸಲ್ಲಿಸಿದರು.

ಪತ್ನಿ ತ್ರಿಷಿಕಾ ಹಾಗೂ ಮಗನೊಂದಿಗೆ ಅರಮನೆ ಆವರಣದಲ್ಲಿರುವ ತ್ರಿನೇಶ್ವರದೇವಾಲಯಯಕ್ಕೆ ತೆರಳಿ ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿಯಿಂದ ಯದುವೀರ್ ಹಾಗೂ ತ್ರಿಷಿಕಾ ದಂಪತಿಗೆ ಶಾಲು ಹೊಡಿದ್ಸಿ ಗೌರವಿಸಲಾಯಿತು.

ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ತ್ರಿನೇಶ್ವರನಿಗೆ ಚಿನ್ನದ ಮುಖವಾಡ ಧರಿಸಿ ವಿಶೇಷ ಅರ್ಚನೆ, ಪಂಚಾಮೃತ ಅಭಿಷೇಕ ನೆರವೇರಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular