HomeLatest Newsಮಹಾಶಿವರಾತ್ರಿ 2026: ಬೆಂಗಳೂರು-ವಿಜಯಪುರ ವಿಶೇಷ ರೈಲು, ವೇಳಾಪಟ್ಟಿ

ಮಹಾಶಿವರಾತ್ರಿ 2026: ಬೆಂಗಳೂರು-ವಿಜಯಪುರ ವಿಶೇಷ ರೈಲು, ವೇಳಾಪಟ್ಟಿ

ಮಹಾಶಿವರಾತ್ರಿ-2026ರ ಸಂದರ್ಭದಲ್ಲಿ ಉಂಟಾಗುವ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ನೈಋತ್ಯ ರೈಲ್ವೆ ವಿಶೇಷ ರೈಲುಗಳ ಘೋಷಣೆ ಮಾಡಿದೆ. ಕ್ಯಾಲೆಂಡರ್ ಪ್ರಕಾರ ಫೆಬ್ರವರಿ 15ರ ಭಾನುವಾರ ಶಿವರಾತ್ರಿ ಹಬ್ಬವಿದೆ. ವಾರಾಂತ್ಯದ ರಜೆಯೂ ಸೇರುವ ಕಾರಣ ಹೆಚ್ಚಿನ ಜನರು ಸಂಚಾರ ನಡೆಸಬಹುದು ಎಂದು ಅಂದಾಜಿಸಲಾಗಿದೆ.

ನೈಋತ್ಯ ರೈಲ್ವೆ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಎಸ್ಎಂವಿಟಿ ಬೆಂಗಳೂರು-ವಿಜಯಪುರ-ಎಸ್ಎಂವಿಟಿ ಬೆಂಗಳೂರು ನಡುವೆ ವಿಶೇಷ ರೈಲು ಓಡಿಸಲಿದೆ.

ಮಹಾಶಿವರಾತ್ರಿ ಅಂಗವಾಗಿ ಮಾತ್ರ ಈ ವಿಶೇಷ ರೈಲುಗಳು ಸಂಚಾರವನ್ನು ನಡೆಸಲಿವೆ. ಈ ರೈಲುಗಳು 22 ಬೋಗಿಗಳನ್ನು ಒಳಗೊಂಡಿದ್ದು, ಪ್ರಯಾಣಿಕರ ಮಾಹಿತಿಗಾಗಿ ವೇಳಾಪಟ್ಟಿ, ನಿಲ್ದಾಣಗಳ ಮಾಹಿತಿಯನ್ನು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈಲಿನ ವೇಳಾಪಟ್ಟಿ

  • ರೈಲು ಸಂಖ್ಯೆ 06503 ಎಸ್ಎಂವಿಟಿ ಬೆಂಗಳೂರು-ವಿಜಯಪುರ ನಡುವಿನ ರೈಲು 13/2/2026ರ ಶುಕ್ರವಾರ 19:15ಕ್ಕೆ ಹೊರಟು, ವಿಜಯಪುರವನ್ನು ಮರುದಿನ 7:15ಕ್ಕೆ ತಲುಪಲಿದೆ.
  • ರೈಲು ಸಂಖ್ಯೆ06504 ವಿಜಪುರ- ಎಸ್ಎಂವಿಟಿ ಬೆಂಗಳೂರು 16/2/2025ರ ಸೋಮವಾರ 17:30ಕ್ಕೆ ಹೊರಟು ಮರುದಿನ 6:30ಕ್ಕೆ ಬೆಂಗಳೂರು ತಲುಪಲಿದೆ.

ಈ ರೈಲುಗಳು ಎರಡೂ ಮಾರ್ಗದಲ್ಲಿ ಎಸ್ಎಂವಿಟಿ ಬೆಂಗಳೂರು, ಚಿಕ್ಕಬಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಬಾದಾಮಿ, ಬಾಗಲಕೋಟೆ, ಆಲಮಟ್ಟಿ ಮತ್ತು ವಿಜಯಪುರದಲ್ಲಿ ನಿಲುಗಡೆ ಹೊಂದಿದೆ.

ಈ ರೈಲು ಸೇವೆಯ ಹೆಚ್ಚಿನ ಮಾಹಿತಿ ಮತ್ತು ಇತರ ವಿವರಕ್ಕಾಗಿ ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವ 139 ಸಂಖ್ಯೆಗೆ ಡಯಲ್ ಮಾಡಿ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular