HomeLatest Newsಮಹಾತ್ಮ ಗಾಂಧೀ ಸೇವಾ ಪ್ರಶಸ್ತಿಕರ್ನಾಟಕ : ಆಯ್ಕೆಗೆ ಅರ್ಜಿ ಆಹ್ವಾನ

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿಕರ್ನಾಟಕ : ಆಯ್ಕೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು.

ಮಹಾತ್ಮ ಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ “ಅಸ್ಪೃಶ್ಯತೆ ನಿವಾರಣೆ”, “ಅಹಿಂಸೆ”, “ಮಹಿಳಾ ಸಬಲೀಕರಣ”, “ಗ್ರಾಮೀಣ ನೈರ್ಮಲ್ಯ”, “ಮದ್ಯಪಾನ ವಿರೋಧಿ ನೀತಿ”, “ಖಾದಿ ಮತ್ತು ಸ್ವದೇಶಿ ವಸ್ತು ಬಳಕೆ”, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಏಳಿಗೆ”- ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿಗಳನ್ನು 2025 ನೇ ಸೆಪ್ಟೆಂಬರ್ 19 ರೊಳಗಾಗಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ. ನಂ. 17. ಭಗವಾನ್ ಮಹಾವೀರ ರಸ್ತೆ (ಇನ್ಫೆಂಟ್ರಿ ರಸ್ತೆ), ಬೆಂಗಳೂರು – 560001 ಅಥವಾ ಇ – ಮೇಲ್ ವಿಳಾಸ [email protected] ಹಾಗೂ ಖುದ್ದಾಗಿ ಇಲಾಖೆಗೆ ಕಳುಹಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular