ಒಂದೇ ವಾರದಲ್ಲಿ 2 ನೇ ಘಟನೆ: ಹೈದರಾಬಾದ್‌ ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ

ಹೈದರಾಬಾದ್‌ ನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಕೆಲವು ಅಪರಿಚಿತ ವ್ಯಕ್ತಿಗಳು ಸೋಮವಾರ ರಾತ್ರಿ ಧ್ವಂಸಗೊಳಿಸಿದ್ದಾರೆ. ಹೈದರಾಬಾದ್‌ನ ಕುಕಟ್‌ಪಲ್ಲಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಪ್ರತಿಮೆಯ ತಲೆಯನ್ನು ತೆಗೆದು ಕೆಳಭಾಗದಲ್ಲಿ ಇಡಲಾಗಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ಈ ವೀಡಿಯೊ ಹರಿದಾಡುತ್ತಿದೆ. ಘಟನೆ ಕುರಿತು ಸ್ಥಳೀಯ ನಿವಾಸಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಬಾಚುಪಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದು, ಕೃತ್ಯಕ್ಕೆ ಕಾರಣರಾದವರನ್ನು ಗುರುತಿಸಿ ಅವರ ಬಂಧನಕ್ಕಾಗಿ ತೀವ್ರ ಕಾರ್ಯಾಚರಣೆ ನಡೆಸಿದ್ದಾರೆ.

ಇದೇ ರೀತಿಯ ಘಟನೆಯಲ್ಲಿ, ದೀಪಾವಳಿ ರಾತ್ರಿ ನಗರದ ಬೋವನಪಲ್ಲಿ ಪ್ರದೇಶದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಗೆ ಅವಮಾನಿಸಲಾಗಿತ್ತು. ಕೆಲವು ಯುವಕರು ಪ್ರತಿಮೆ ಬಾಯಲ್ಲಿ ಪಟಾಕಿ ಸಿಡಿಸುತ್ತಿರುವ ದೃಶ್ಯ ವೈರಲ್ ಆಗಿತ್ತು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read