ಬೆಂಗಳೂರು: ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ಗಡಿಇಪಾರು ಆದೆಶ ಕುರಿತ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.
ಮಹೇಶ್ ಶಟ್ಟಿ ತಿಮರೋಡಿ ತನ್ನನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡಿಪಾರು ಮಾಡಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪನ್ನು ಕಾಯ್ದಿರಿಸಿದೆ.
ತಮ್ಮನ್ನು ಮಾನ್ವಿಗೆ ಗಡಿಪಾರು ಮಾಡಿದ್ದ ಪುತ್ತೂರು ಉಪವಿಭಾಗಾಧಿಕಾರಿ ಕ್ರಮವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿದ್ದು ತೀರ್ಪನ್ನು ಕಾಯ್ದಿರಿಸಿದೆ.
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ವಿವಿಧ ಠಾಣೆಗಳಲ್ಲಿ 32ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆದ್ದರಿಂದ ಅವರಿಂದ ಶಾಂತಿಭಂಗಕ್ಕೆ ಕಾರಣವಾಗುತ್ತಿದ್ದು, ಸಮಾಜದಲ್ಲಿ ಅಶಾಂತಿಯನ್ನುಂಟು ಮಾಡಿದ್ದಾರೆ. ಆದ ಕಾರಣ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂಬುದಾಗಿ ಬಂಟ್ವಾಳ ಉಪವಿಭಾಗದ ಪೊಲೀಸರು ಮನವಿ ಸಲ್ಲಿಸಿದ್ದರು. ಈ ಮನವಿ ಪರಿಗಣಿಸಿದ್ದ ಪುತ್ತೂರಿನ ಉಪ ವಿಭಾಗಾಧಿಕಾರಿಯವರು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿ ಆದೇಶಿಸಿದ್ದರು. ಈ ಆದೇಶ ರದ್ದು ಮಾಡಬೇಕು ಎಂದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರು.

