ಬೆಂಗಳೂರು: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣ ಹಾಗೂ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣದ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರಿಗೆ ಆದೇಶ ನೀಡಿದ ಹಿನ್ನೆಲೆಯಲ್ಲಿ, ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸ್ಥಳೀಯ ಆಡಳಿತದ ಗಡಿಪಾರು ಆದೇಶವನ್ನು ಪ್ರಶ್ನಿಸಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಗಡಿಪಾರು ಆದೇಶವನ್ನು ರದ್ದುಪಡಿಸುವಂತೆ ಮನವಿ ಮಾಡಿದ್ದಾರೆ.
ಈ ನಡುವೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಸೆಪ್ಟೆಂಬರ್ 30ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ. ಆಕ್ಷೇಪಣೆ ಸಲ್ಲಿಕೆಗೆ ಸರ್ಕಾರಿ ಅಭಿಯೋಜಕರು ಕಾಲಾವಕಾಶ ಕೋರಿದ್ದರಿಂದ ಮಂಗಳವಾರಕ್ಕೆ ಅರ್ಜಿ ವಿಚಾರಣೆ ಮುಂದೂಡಲಾಗಿದೆ.