HomeLatest NewsBREAKING: ಬ್ರಹ್ಮಾವರ ಪೊಲೀಸರಿಂದ ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್

BREAKING: ಬ್ರಹ್ಮಾವರ ಪೊಲೀಸರಿಂದ ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್

ಮಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ವಿರುದ್ಧ ಉಡುಪಿಯ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಬ್ರಹ್ಮಾವರ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಮಹೇಶ್ ತಿಮರೋಡಿ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಉಜಿರೆ ನಿವಾಸಕ್ಕೆ ಉಡುಪಿ ಎಎಸ್ ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ಎಂಟ್ರಿ ಕೊಟ್ಟಿದ್ದು, ವಿಚಾರಣೆಗೆ ಕರೆದೊಯ್ದಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಬ್ರಹ್ಮಾವರಣ ಠಾಣೆ ಪೊಲೀಸರು ಮಹೇಶ್ ತಿಮರೋಡಿಯನ್ನು ಬಂಧಿಸಿದ್ದಾರೆ. ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ಎಸ್ ಪಿ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular