ಮಂಗಳೂರು: ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆಯಲು ಅವರ ಮನೆಗೇ ಆಗಮಿಸಿರುವ ಘಟನೆ ಉಜಿರೆಯಲ್ಲಿ ನಡೆದಿದೆ.
ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಮಹೇಶ್ ತಿಮರೋಡಿ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಉಜಿರೆ ನಿವಾಸಕ್ಕೆ ಉಡುಪಿಬ್ ಎ ಎಸ್ ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ಆಗಮಿಸಿದೆ.
ಮಹೇಶ್ ಶೆಟ್ತಿ ತಿಮರೋಡಿ ತಮ್ಮ ಮನೆಯ ಒಳಗಿದ್ದು, ಹೊರಬರದೇ ಸತಾಯಿಸುತ್ತಿದ್ದಾರೆ. ವಹೇಶ್ ಶೆಟ್ಟಿ ತಿಮರೋಡಿಯನ್ನು ನಾವೇ ಬ್ರಹ್ಮಾವರ ಠಾಣೆಗೆ ಕರೆತರುತ್ತೇವೆ ಎಂದು ಅವರ ಪರ ವಕೀಲರು ಪೊಲೀಸರ ಬಳಿ ಹೇಳುತ್ತಿದ್ದಾರೆ. ಆದರೆ ಪೊಲೀಸರು ವಶೇಶ್ ತಿಮರೋಡಿಯನ್ನು ಹೊರಗೆ ಕರೆಯುವಂತೆ ಸೂಚಿಸಿದ್ದು, ಮನೆಯ ಬಳಿ ಪೊಲೀಸರು ಬೀಡುಬಿಟ್ಟಿದ್ದಾರೆ.