HomeLatest NewsBREAKING: ನನ್ನ ಜೀವಕ್ಕೆ ಏನಾದರೂ ಆದರೆ ಸರ್ಕಾರವೇ ಕಾರಣ: ಮಹೇಶ್ ಶೆಟ್ಟಿ ತಿಮರೋಡಿ ಆಕ್ರೋಶ

BREAKING: ನನ್ನ ಜೀವಕ್ಕೆ ಏನಾದರೂ ಆದರೆ ಸರ್ಕಾರವೇ ಕಾರಣ: ಮಹೇಶ್ ಶೆಟ್ಟಿ ತಿಮರೋಡಿ ಆಕ್ರೋಶ

ಮಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಅವರ ಮನೆಗೆ ಬಂದು ಪೊಲೀಸರು ವಿಚಾರಣೆಗೆ ಠಾಣೆಗೆ ಕರೆದೊಯ್ದಿದ್ದಾರೆ.

ಪೊಲೀಸರ ಜೊತೆ ವಿಚಾರಣೆಗೆ ತೆರಳುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಶ್ ಶೆಟ್ಟಿ ತಿಮರೋಡಿ, ನನ್ನ ಜೀವಕ್ಕೆ ಏನಾದೂ ಆದರೆ ಸರ್ಕಾರವೇ ನೇರ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನನ್ನ ಜೀವಕ್ಕೆ ಏನಾದರೂ ತೊಂದರೆಯಾದರೆ ಅದಕ್ಕೆ ಸರ್ಕಾರವೇ ಕಾರಣ. ಮಾತ್ರವಲ್ಲ ಇಡೀ ಬಿಜೆಪಿಯೇ ಹೊಣೆಯಾಗುತ್ತದೆ ಎಂದು ಕಿಡಿಕಾರಿದ್ದಾರೆ.

ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ವಿರುದ್ಧ ಉಡುಪಿಯ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಬ್ರಹ್ಮಾವರ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಮಹೇಶ್ ತಿಮರೋಡಿ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಉಜಿರೆ ನಿವಾಸಕ್ಕೆ ಉಡುಪಿ ಎಎಸ್ ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ಎಂಟ್ರಿ ಕೊಟ್ಟಿದ್ದು, ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ತಮ್ಮ ಮನೆಯ ಒಳಗಿದ್ದು, ಹೊರಬರದೇ ಸತಾಯಿಸುತ್ತಿದ್ದಾರೆ. ವಹೇಶ್ ಶೆಟ್ಟಿ ತಿಮರೋಡಿಯನ್ನು ನಾವೇ ಬ್ರಹ್ಮಾವರ ಠಾಣೆಗೆ ಕರೆತರುತ್ತೇವೆ ಎಂದು ಅವರ ಪರ ವಕೀಲರು ಪೊಲೀಸರ ಬಳಿ ಹೇಳಿ ಮನವೊಲಿಕೆ ಯತ್ನ ನಡೆಸಿದರು. ಆದಾಗ್ಯೂ ಒಪ್ಪದ ಪೊಲೀಸರು ಮಹೇಶ್ ತಿಮರೋಡಿಯನ್ನು ಹೊರಗೆ ಬರುವಂತೆ ಸೂಚಿಸಿದ್ದಾರೆ. ಕೆಲ ಕಾಲ ನಿವಾಸದ ಬಳಿ ಹೈಡ್ರಾಮಾ ನಡೆದಿದೆ. ಬಳಿಕ ಮನೆಯಿಂದ ಹೊರ ಬಂದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಠಾಣೆಗೆ ಕರೆದೊಯ್ದಿದಾರೆ.

For Latest News Updates, Join Our Whatsapp Community🚩
RELATED ARTICLES

Most Popular