ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿಯ ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಿಮರೋಡಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಮಹೇಶ್ ಶೆಟ್ಟಿ ತಿಮರೋಡಿ ಬಂಧನ ವಿಚಾರವಾಗಿ ನಾವು ಯಾವುದೇ ಹೆಚ್ಚಿನ ಪ್ರತಿಕ್ರಿಯೆ ನೀಡಲ್ಲ. ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಂಡಿದೆ. ಇದರಲ್ಲಿ ನಾವು ಮಧ್ಯಪ್ರವೇಶ ಮಾಡಲ್ಲ ಎಂದು ಹೇಳಿದ್ದಾರೆ.