ಮಂಗಳೂರು: ಹಿಂದೂ ಸಂಘಟನೆ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್ ಜಾಮೀನು ಕುರಿತ ತೀರ್ಪು ನೀಡಲಿದೆ. ನ್ಯಾಯಾಲಯ ಇಂದಿಗೆ ಆದೇಶವನ್ನು ಕಾಯ್ದಿರಿಸಿದ್ದು, ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿಗೆ ನೋಟಿಸ್ ನೀಡಿದ್ದಾರೆ. ತಿಮರೋಡಿಗೆ ಬೆಳ್ತಂಗಡಿ ಠಾಣೆ ಪೊಲೀಸರು ಮೂರು ಬಾರಿ ನೋಟಿಸ್ ನೀಡಿದ್ದಾರೆ. ಆದರೆ ವಿಚಾರಣೆಗೆ ಹಾಜರಾಗದೆ ನಾಪತ್ತೆಯಾಗಿದ್ದಾರೆ. ಕಳೆದ 20 ದಿನಗಳಿಂದ ಮಹೇಶ್ ಶೆಟ್ಟಿ ತಿಮರೋಡಿ ತಲೆಮರೆಸಿಕೊಂಡಿದ್ದಾರೆ.