ಮಂಗಳೂರು: ಮನೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಕೂಡಿಟ್ಟಿರುವ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಹೋರಾಟಗಾರ ಮಹೇಶ್ ತಿಮರೋಡಿ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆಹೋಗಿದ್ದಾರೆ.
ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಆರೋಪದಲ್ಲಿ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಂಧನ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ ಮೊರೆ ಹೋಗಿರುವ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ನಾಳೆ ಅರ್ಜಿ ವಿಚಾರಣೆ ನಡೆಯಲಿದೆ. ಈ ನಡುವೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿಗೆ ಗಡಿಪಾರು ಮಾಡಲಾಗಿದೆ. ತಿಮರೋಡಿ ವಿರುದ್ಧ 32 ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಎಸಿ ಸ್ಟೆಲ್ಲಾ ವರ್ಗೀಸ್, ಒಂದು ವರ್ಷದ ಅವಧಿಗೆ ತಿಮರೋಡಿಯನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.
TAGGED:ಮಹೇಶ್ ತಿಮರೋಡಿ