ಮಂಗಳೂರು: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿರುವುದನ್ನು ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ನಡೆಸಲು ಮುಂದಾಗಿದ್ದ ಪ್ರತಿಭಟನೆಗೆ ಅನುಮತಿ ನಿರಾಕರಿಸಲಾಗಿದೆ.
ಮಹೇಶ್ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಒಂದು ವರ್ಷ ಅವಧಿಗೆ ಗಡುಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರಾಗಿರುವ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.
ಗಡಿಪಾರು ಆದೇಶದ ವಿರುದ್ಧ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಸೆ.೨೯ರಂದು ಬೆಳಂಗಡಿ ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಬೆಳ್ತಂಗಡಿ ತಹಶೀಲ್ದಾರ್, ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದಾರೆ.
ಪ್ರತಿಭಟನೆಯಿಂದ ಸಾರ್ವಜನಿಕರ ಶಾಂತಿಗೆ ಭಂಗವುಂಟಾಗಿ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಎಂದು ತಹಶೀಲ್ದಾರ್ ಪೃಥ್ವಿ ಸಾನಿಕಂ ತಿಳಿಸಿದ್ದಾರೆ.
You Might Also Like
TAGGED:ಮಹೇಶ್ ತಿಮರೋಡಿ