ಮಂಗಳೂರು: ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಮಹೇಶ್ ತಿಮರೋಡಿಗೆ ಕೋರ್ಟ್ ಬಿಗ್ ಶಾಕ್ ನೀಡಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ.
ಮಹೇಶ್ ತಿಮರೋಡಿ ನಿವಾಸದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಶಸ್ತ್ರಾಸ್ತ್ರ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ತಿಮರೋಡಿ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಪೊಲೀಸರು ಮಹೇಶ್ ತಿಮರೋಡಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಈ ನಡುವೆ ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲರು ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು.
ಮಹೇಶ್ ಶೆಟ್ಟಿ ತಿಮರೋಡಿಗೆ ಮೂರು ಬಾರಿ ಪೊಲೀಸರು ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ನಡುವೆ ಕಳೆದ 20 ದಿನಗಳಿಂದ ತಿಮರೋಡಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ತಿಮರೋಡಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದಕ್ಷಿಣ ಕನ್ನಡ ಸೆಷನ್ಸ್ ಕೋರ್ಟ್, ತಿಮರೋಡಿಗೆ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ್ದು, ಅರ್ಜಿ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ತಿಮರೋಡಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.