ಬೆಂಗಳೂರು: ಧರ್ಮಸ್ಥಳದ ವಿವಿಧೆಡೆಗಳಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದ ಚಿನ್ನಯ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಮಹೇಶ್ ತಿಮರೋಡಿಗೆ ಹೈಕೋರ್ಟ್ ರಿಲೀಫ್ ನೀಡಿದೆ.
ತನ್ನ ವಿರುದ್ಧ ಗಡಿಪಾರು ಆದೇಶ ರದ್ದು ಮಾಡುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ತಿಮರೋಡಿ ಅರ್ಜಿ ವಿಚಾರಣೆಯನ್ನು ನಡೆಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ಎರಡೂ ಕಡೆ ವಕೀಲರ ವಾದ-ಪ್ರತಿವಾದ ಆಲಿಸಿದ ನ್ಯಾ.ಸೂರಜ್ ಗೋವಿಂದರಾಜ್ ಅವರಿದ್ದ ಪೀಠ, ತಿಮರೋಡಿ ವಿರುದ್ಧ ಬಲವಂತದ ಕ್ರಮ ಬೇಡ ಎಂದು ತಿಳಿಸಿದೆ.
ಹೈಕೋರ್ಟ್ ಆದೇಶದವರೆಗೆ ತಿಮರೋಡಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ. ಮುಂದಿನ ಆದೇಶದವರೆಗೂ ಗಡಿಪಾರು ಜಾರಿಗೊಳಿಸುವಂತಿಲ್ಲ ಎಂದು ಸೂಚಿಸಿದೆ.