HomeLatest NewsBREAKING: ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು

BREAKING: ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಲ್ಲಿ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

ಮಹೇಶ್ ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಎಸಿ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹೇಶ್ ತಿಮರೋಡಿಯನ್ನು ಒಂದು ವರ್ಷಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗಿದೆ. ಮಹೇಶ್ ತಿಮರೋಡಿ ಸೌಜನ್ಯ ಪ್ರಕರಣದಲ್ಲಿಯೂ ಹೋರಾಟ ನಡೆಸಿದ್ದರು. ಅಲ್ಲದೇ ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಭಾಗಿಯಾಗಿದ್ದರು. ಅವರ ವಿರುದ್ಧ ಹಲವು ಕೇಸ್ ಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular