HomeIndiaBig Update: ಕೇರಳ ಚುನಾವಣೆ, ಕಾಂಗ್ರೆಸ್ ಹಿರಿಯ ನಾಯಕಿ ಬಿಜೆಪಿ ಸೇರ್ಪಡೆ!

Big Update: ಕೇರಳ ಚುನಾವಣೆ, ಕಾಂಗ್ರೆಸ್ ಹಿರಿಯ ನಾಯಕಿ ಬಿಜೆಪಿ ಸೇರ್ಪಡೆ!

ಕೇರಳ ವಿಧಾನಸಭೆ ಚುನಾವಣೆ 2026ರ ಹೊತ್ತಿನಲ್ಲಿಯೇ ಕಾಂಗ್ರೆಸ್‌ಗೆ ಬಿಗ್ ಶಾಕ್. ಕೇರಳ ರಾಜ್ಯದ 140 ಸದಸ್ಯ ಬಲದ ವಿಧಾನಸಭೆಗೆ ಏಪ್ರಿಲ್‌ನಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್‌ನಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ. ರಾಜಕೀಯ ಪಕ್ಷಗಳ ತಯಾರಿ ಆರಂಭವಾಗಿದೆ.

ಕೇರಳ ಮಹಿಳಾ ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ 2021ರ ವಿಧಾನಸಭಾ ಚುನಾವಣೆಯಲ್ಲಿ ಕೊಟ್ಟಾರಕ್ಕರ ಕ್ಷೇತ್ರದ ಯುಡಿಎಫ್ ಅಭ್ಯರ್ಥಿಯಾಗಿದ್ದ ಆರ್. ರಶ್ಮಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಸಮ್ಮುಖದಲ್ಲಿ ಆರ್. ರಶ್ಮಿ ಬಿಜೆಪಿ ಸೇರ್ಪಡೆಯಾದರು. ಸದ್ಯದ ಮಾಹಿತಿಯಂತೆ ಸಿಪಿಎಂನ ಮಾಜಿ ಶಾಸಕಿ ಐಷಾ ಪೋಟ್ಟಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಅವರನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೊಟ್ಟಾರಕ್ಕರ ಕ್ಷೇತ್ರದಿಂದ ಯುಡಿಎಫ್ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ನಿರೀಕ್ಷೆ ಇದೆ. ಆದ್ದರಿಂದ ಆರ್.ರಶ್ಮಿ ಬಿಜೆಪಿ ಸೇರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್. ರಶ್ಮಿ ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ರಾಜೀವ್ ಚಂದ್ರಶೇಖರ್, “ರಶ್ಮಿ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ” ಎಂದು ಹೇಳಿದ್ದಾರೆ. ಆದರೆ, ಅವರಿಗೆ ಯಾವ ಕ್ಷೇತ್ರವನ್ನು ಹಂಚಿಕೆ ಮಾಡಲಾಗುವುದು? ಎಂಬ ಕುರಿತು ಅವರು ಹೇಳಿಕೆ ನೀಡಿಲ್ಲ.

“ಕಾಂಗ್ರೆಸ್ ಪಕ್ಷದಲ್ಲಿ ಉಂಟಾದ ಕಹಿ ಅನುಭವಗಳಿಂದಾಗಿ ತಾವು ಬಿಜೆಪಿ ಸೇರಿದ್ದೇನೆ” ಎಂದು ರಶ್ಮಿ ಹೇಳಿದ್ದಾರೆ. ಆದರೆ ವಿವರಗಳನ್ನು ಬಹಿರಂಗಪಡಿಸಿಲ್ಲ. “ಐಷಾ ಪೋಟ್ಟಿ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವುದಕ್ಕೂ, ತಾವು ಬಿಜೆಪಿ ಸೇರಿರುವುದಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ರಶ್ಮಿ ಅವರು ಮಹಿಳಾ ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಸಾಂಸ್ಕೃತಿಕ ಸಾಹಿತ್ಯ ವಿಭಾಗದಲ್ಲಿಯೂ ಕಾರ್ಯನಿರ್ವಹಿಸಿದ್ದರು. 2021ರ ಚುನಾವಣೆಯಲ್ಲಿ ಅವರು ಕೊಟ್ಟಾರಕ್ಕರ ಕ್ಷೇತ್ರದಲ್ಲಿ ಇಂದಿನ ಹಣಕಾಸು ಸಚಿವ ಕೆ.ಎನ್.ಬಾಲಗೋಪಾಲ್ ಎದುರಾಳಿಯಾಗಿದ್ದು, ಭಾರೀ ಪೈಪೋಟಿ ನೀಡಿದ್ದರು.

“ಎರಡು ದಶಕದಿಂದ ಕಾಂಗ್ರೆಸ್‌ ಪ್ರತಿನಿಧಿಯಾಗಿ ಕೆಲಸ ಮಾಡಿದ್ದೇನೆ. ಆದರೆ 2021ರ ಚುನಾವಣೆಯಲ್ಲಿ ಕೆ.ಎನ್.ಬಾಲಗೋಪಾಲ್ ವಿರುದ್ಧ ಕಡಿಮೆ ಮತಗಳ ಅಂತರದಿಂದ ಸೋತರೂ ಸಹ ಪಕ್ಷದಲ್ಲಿ ಕಹಿ ಅನುಭವಿಸಿದೆ. ಕ್ಷೇತ್ರದಲ್ಲಿ ಸಕ್ರಿಯವಾಗಿ ಇರಲು ಸಹಕಾರ ದೊರೆಯಲಿಲ್ಲ” ಎಂದು ರಶ್ಮಿ ಹೇಳಿದ್ದಾರೆ.

ಆರ್. ರಶ್ಮಿ ಎರಡು ದಶಕಗಳ ರಾಜಕೀಯ ಜೀವನದಲ್ಲಿ ಕುಳಕ್ಕಡ ಗ್ರಾಮ ಪಂಚಾಯತ್ ಸದಸ್ಯೆಯಾಗಿ ಮತ್ತು ಕೊಲ್ಲಂ ಜಿಲ್ಲಾ ಪಂಚಾಯತ್ ಸದಸ್ಯೆಯಾಗಿ ಸೇವೆ ಸಲ್ಲಿಸಿದ್ದಾರೆ. 2021ರ ವಿಧಾನಸಭಾ ಚುನಾವಣೆಯಲ್ಲಿ ಕೊಟ್ಟಾರಕ್ಕರ ಕ್ಷೇತ್ರದಲ್ಲಿ ಸಿಪಿಎಂನ ಪ್ರಭಾವಿ ನಾಯಕ ಕೆ.ಎನ್. ಬಾಲಗೋಪಾಲ್ ವಿರುದ್ಧ 10,814 ಮತಗಳ ಅಂತರದಿಂದ ಸೋಲು ಕಂಡಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular