HomeKarnatakaSHOCKING : ಬೆಂಗಳೂರಲ್ಲಿ ಕುಡಿದು ಬಂದವನಿಗೆ ಕಾರು 'ಟೆಸ್ಟ್ ಡ್ರೈವ್' ನೀಡಿದ ಶೋರೂಂ ಸಿಬ್ಬಂದಿ ;...

SHOCKING : ಬೆಂಗಳೂರಲ್ಲಿ ಕುಡಿದು ಬಂದವನಿಗೆ ಕಾರು ‘ಟೆಸ್ಟ್ ಡ್ರೈವ್’ ನೀಡಿದ ಶೋರೂಂ ಸಿಬ್ಬಂದಿ ; ಸರಣಿ ಅಪಘಾತ, ಓರ್ವನ ಕಾಲು ಕಟ್

ಬೆಂಗಳೂರು : ಸಿಲಿಕಾನ್ ಸಿಟಿಯ ಮಹದೇವಪುರದಲ್ಲಿ ಮಹೀಂದ್ರಾ ಕಾರು ಶೋರೂಂ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಭೀಕರ ಅಪಘಾತವೊಂದು ಸಂಭವಿಸಿದೆ. ಕುಡಿದ ಮತ್ತಿನಲ್ಲಿ ಬಂದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ಗಾಗಿ ಕಾರು ನೀಡಿದ್ದೇ ಈ ದೊಡ್ಡ ಅನಾಹುತಕ್ಕೆ ಕಾರಣವಾಗಿದೆ.

ಹೌದು.   ಕಾರ್ ಶೋರೂಂ ಸಿಬ್ಬಂದಿಯ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರು ಬಲಿಯಾಗಿದ್ದಾರೆ. ಮದ್ಯಪಾನ ಮಾಡಿ ಬಂದಿದ್ದ ವ್ಯಕ್ತಿಗೆ ಕಾರು ಚಲಾಯಿಸಲು ನೀಡಿ ದೊಡ್ಡ ಅನಾಹುತಕ್ಕೆ ಹಾದಿ ಮಾಡಿಕೊಟ್ಟಿದ್ದಾರೆ. ಈ ಘಟನೆಯು ಶೋರೂಂಗಳಲ್ಲಿ ಟೆಸ್ಟ್ ಡ್ರೈವ್ ನೀಡುವ ಮುನ್ನ ಅನುಸರಿಸಬೇಕಾದ ನಿಯಮಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ.

ಏಪ್ರಿಲ್ 12ರಂದು ಮಹದೇವಪುರದ ವಿಜ್ಞೇಶ್ವರ ನಗರದಲ್ಲಿರುವ ಮಹೀಂದ್ರಾ ಶೋರೂಂನಲ್ಲಿ ಈ ಘಟನೆ ನಡೆದಿದೆ. ಶೋರೂಂಗೆ ಕುಡಿದ ಮತ್ತಿನಲ್ಲಿ ಬಂದಿದ್ದ ಅಭಿಲಾಶ್ ಎಂಬಾತನಿಗೆ ಸಿಬ್ಬಂದಿ ಕಾರನ್ನು ಟೆಸ್ಟ್ ಡ್ರೈವ್‌ಗೆ ನೀಡಿದ್ದಾರೆ. ಕಾರು ಹತ್ತಿದ ಅಭಿಲಾಶ್, ರಸ್ತೆಯಲ್ಲಿ ಮನಬಂದಂತೆ ವಾಹನ ಚಲಾಯಿಸಿದ್ದಾನೆಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ಅಭಿಲಾಶ್ ನಾಲ್ಕು ಹೊಸ ಕಾರುಗಳಿಗೆ ಗುದ್ದಿದ್ದಾನೆ. ಇದರಿಂದ ಹಲವು ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಂಭೀರ ಗಾಯ: ರಮೇಶ್ ಎಂಬುವರ ಕಾರಿಗೆ ಗುದ್ದಿದ ರಭಸಕ್ಕೆ ಅವರ ಕಾಲು ಮುರಿದಿದೆ. ಪ್ರಸ್ತುತ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಜಮಾಯಿಸಿ, ಆರೋಪಿ ಅಭಿಲಾಶ್‌ಗೆ ತೀವ್ರವಾಗಿ ಥಳಿಸಿದ್ದಾರೆ. ಆತನಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಪೊಲೀಸ್ ಕ್ರಮ

ಈ ಸಂಬಂಧ ಮಹದೇವಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಪೊಲೀಸರು ಅಭಿಲಾಶ್‌ಗೆ ನೋಟಿಸ್ ಜಾರಿ ಮಾಡಿದ್ದು, ಐಎಂವಿ (IMV) ಕಾಯ್ದೆ ಹಾಗೂ ಬಿಎನ್‌ಎಸ್ 125(ಎ), 281 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular