HomeAgricultureರೈತರೇ ಮೆಕ್ಕೆಜೋಳ ಮಾರಾಟ ಮಾಡುವ ಮುನ್ನ ತಿಳಿಯಿರಿ

ರೈತರೇ ಮೆಕ್ಕೆಜೋಳ ಮಾರಾಟ ಮಾಡುವ ಮುನ್ನ ತಿಳಿಯಿರಿ

ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಮೆಕ್ಕೆಜೋಳ ಉತ್ಪನ್ನ ಖರೀದಿ ಕುರಿತಂತೆ ವಿವಿಧ ಎಪಿಎಂಸಿ ಮಾರುಕಟ್ಟೆಗಳಲ್ಲಿ ಆಗುವ ವಹಿವಾಟಿನ ಧಾರಣೆಯ ಆಧಾರದ ಮೇಲೆ ರೈತರಿಗೆ ಬೆಲೆ ವ್ಯೆತ್ಯಾಸದ ಮೊತ್ತವನ್ನು ಡಿಬಿಟಿ ಮೂಲಕ ಪಾವತಿಸಲಾಗುತ್ತದೆ.

ಸರ್ಕಾರದ ಆದೇಶ ದಿನಾಂಕ 04/01/2026ರಂತೆ 2025-26ನೇ ಸಾಲಿನ ಮುಂಗಾರು ಹಂಗಾಮಿನ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ಮೆಕ್ಕೆಜೋಳವನ್ನು ವಿವಿಧ ಎಪಿಎಂಸಿ ಮಾರುಕಟ್ಟೆಗಳಲ್ಲಿ ಆಗುವ ವಹಿವಾಟಿನ ಧಾರಣೆಯ ಆಧಾರದ ಮೇಲೆ ರೈತರಿಗೆ ಬೆಲೆ ವ್ಯೆತ್ಯಾಸದ ಮೊತ್ತವನ್ನು ಡಿಬಿಟಿ ಮುಖಾಂತರ ಬ್ಯಾಂಕ್ ಖಾತೆಗೆ ಪಾವತಿಸಲಾಗುವುದು.

ಮಾರುಕಟ್ಟೆ ಮಧ್ಯ ಪ್ರವೇಶದ ದರ ಪ್ರತಿ ಕ್ವಿಂಟಲ್‌ಗೆ ಗರಿಷ್ಠ ರೂ. 2.150 ಗಳನ್ನು ನಿಗದಿಪಡಿಸಿದೆ. ಪ್ರತಿ ಎಕರೆಗೆ 12 ಕ್ವಿಂಟಲ್‌ನಂತೆ ಫ್ರೂಟ್ಸ್ ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕನುಗುಣವಾಗಿ ಪ್ರತಿ ರೈತರಿಗೆ ಗರಿಷ್ಠ 50 ಕ್ವಿಂಟಲ್‌ಗೆ ಮಿತಿಗೊಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾರುಕಟ್ಟೆ ಧಾರಣೆ ಪ್ರತಿ ಕ್ವಿಂಟಲ್‌ಗೆ ರೂ. 1900 ಅಥವಾ ಅದಕ್ಕಿಂತ ಕಡಿಮೆ ದರದಲ್ಲಿ ಮಾರಾಟವಾದರೆ, ಪ್ರತಿ ಕ್ವಿಂಟಲ್‌ಗೆ ಗರಿಷ್ಠ ರೂ. 250 ರಂತೆ ಪಾವತಿಸಲಾಗುವುದು. ಮಾರುಕಟ್ಟೆ ಧಾರಣೆ ಪ್ರತಿ ಕ್ವಿಂಟಲ್‌ಗೆ ರೂ. 1950 ರಂತೆ ಮಾರಾಟವಾದಲ್ಲಿ ವ್ಯತ್ಯಾಸದ ಮೊತ್ತ ರೂಪಾಯಿ ಪ್ರತಿ ಕ್ವಿಂಟಲ್‌ಗೆ ರೂ. 200 ರಂತೆ ಪಾವತಿಸಲಾಗುವುದು.

ಮಾರುಕಟ್ಟೆ ಧಾರಣೆ ಪ್ರತಿ ಕ್ವಿಂಟಲ್‌ಗೆ ರೂ. 2000 ಗಳಂತೆ ಮಾರಾಟವಾದಲ್ಲಿ ವ್ಯತ್ಯಾಸದ ಮೊತ್ತ ರೂಪಾಯಿ ಪ್ರತಿ ಕ್ವಿಂಟಲ್‌ಗೆ ರೂ.150 ರಂತೆ ಪಾವತಿಸಲಾಗುವುದು. ಮಾರುಕಟ್ಟೆ ಧಾರಣೆ ಪ್ರತಿ ಕ್ವಿಂಟಲ್‌ಗೆ ರೂ. 2100 ಗಳಂತೆ ಮಾರಾಟವಾದಲ್ಲಿ ವ್ಯತ್ಯಾಸದ ಮೊತ್ತ ರೂಪಾಯಿ ಪ್ರತಿ ಕ್ವಿಂಟಲ್‌ಗೆ ರೂ. 50 ರಂತೆ ಪಾವತಿಸಲಾಗುವುದು. ಮಾರುಕಟ್ಟೆ ಧಾರಣೆಯು ಪ್ರತಿ ಕ್ವಿಂಟಲ್‌ಗೆ ರೂ. 2150 ಅಥವಾ ಅದಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟವಾದಲ್ಲಿ ಯೋಜನೆಯ ವಾಪ್ತಿಗೆ ಒಳಪಡುವುದಿಲ್ಲ.

ಈಗಾಗಲೆ ರಾಜ್ಯ ಸರ್ಕಾರದ ವತಿಯಿಂದ, ಎಥೆನಾಲ್ ಉತ್ಪಾದನೆಗಾಗಿ ಕುಕ್ಕುಟ ಮತ್ತು ಪಶು ಆಹಾರ ತಯಾರಿಕಾ ಘಟಕಗಳಿಗೆ ಹಾಗೂ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಕ್ಕೆ ಅವಶ್ಯವಿರುವ ಮಕ್ಕೆಜೋಳ ಪೂರೈಕೆ ಮಾಡಿರುವ ರೈತರಿಗೆ ಸದರಿ ಯೋಜನೆಯು ಅನ್ವಯಿಸುವುದಿಲ್ಲ.

ಸದರಿ ಯೋಜನೆಯ ಅನುಷ್ಠಾನ ಅವಧಿಯು ಮೆಕ್ಕೆಜೋಳ ಉತ್ಪನ್ನದ ಮೊದಲ ವಹಿವಾಟು ಯುಎಂಪಿ (UMP) ತಂತ್ರಾಂಶದಲ್ಲಿ ಆಗುವ ದಿನಾಂಕದಿಂದ ಒಂದು ತಿಂಗಳ ಅವಧಿಯವರಿಗೆ ಮಾತ್ರ ಚಾಲ್ತಿಯಲ್ಲಿರುತ್ತದೆ. ಈ ಯೋಜನೆಯ ಪ್ರಯೋಜನ ಪಡೆಯಲು ಎಲ್ಲಾ ರೈತಬಾಂಧವರು ಆಧಾರ್ ಕಾರ್ಡ್, ಫ್ರೂಟ್ಸ್ (FRUITS) ಗುರುತಿನ ಸಂಖ್ಯೆಯೊಂದಿಗೆ ಎನ್‌ಇಎಂಎಲ್ (NeML) ತಂತ್ರಾಂಶದಲ್ಲಿ ಬಯೋಮೆಟ್ರಿಕ್ ಮೂಲಕ ನೋಂದಣಿ ಮಾಡಿಸಿಕೊಂಡು ಎಪಿಎಂಸಿ ಮಾರುಕಟ್ಟೆ ಪ್ರಾಂಗಣಗಳಲ್ಲಿ ಯುಎಂಪಿ ವೇದಿಕೆಯಲ್ಲಿ ಮೆಕ್ಕೆಜೋಳ ಉತ್ಪನ್ನವನ್ನು ಮಾರಾಟ ಮಾಡಬೇಕಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular