ಸಂಕ್ರಾಂತಿ ಬಳಿಕ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ, ಸಿಎಂ ಬದಲಾವಣೆ ಖಚಿತ…! ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಸ್ವಾಮೀಜಿ ಭವಿಷ್ಯ

ಕೆ.ಆರ್. ಪೇಟೆ: ಸಂಕ್ರಾಂತಿ ನಂತರ ಮುಖ್ಯಮಂತ್ರಿ ಬದಲಾವಣೆ ಖಚಿತ ಎಂದು ಕೋಡಿಮಠದ ಶಿವರಾತ್ರಿ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಕ್ರಾಂತಿ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಗಳಾಗಲಿದ್ದು, ಮುಖ್ಯಮಂತ್ರಿ ಬದಲಾವಣೆ ನಡೆಯುವುದು ಖಚಿತ ಎಂದು ಹೇಳಿದ್ದಾರೆ.

ಶಿವನ ಮುಡಿಯ ಮೇಲಿರುವ ಮಲ್ಲಿಗೆ ಶಿವನ ಪಾದಕ್ಕೆ ಬೀಳಲೇಬೇಕು. ರಾಜಕಾರಣದ ಗೊಂದಲವು ಸಂಪೂರ್ಣವಾಗಿ ಬಗೆಹರಿಯಲಿದ್ದು, ಸುಖಾಂತ್ಯ ಕಾಣಲಿದೆ. ಮಕರ ಸಂಕ್ರಾಂತಿ ನಂತರ ನಾಯಕತ್ವ ಗುದ್ದಾಟ ಬಗೆಹರಿಯಲಿದೆ ಎಂದು ಹೇಳಿದ್ದಾರೆ.

ನಾನು ಶಾಸ್ತ್ರ ಹೇಳುವವನಲ್ಲ, ಶಾಸ್ತ್ರಕಾರನಲ್ಲ. ಮುಂದೆ ನಡೆಯುವ ವಿಚಾರಗಳನ್ನು ತಿಳಿಸುವ ಶಕ್ತಿ ಹೊಂದಿದ್ದೇನೆ. ಅದೇ ರೀತಿ ರಾಷ್ಟ್ರ ರಾಜಕಾರಣದಲ್ಲಿಯೂ ಯುಗಾದಿ ಬಳಿಕ ಸಮಸ್ಯೆ ಎದುರಾಗಲಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read