ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. ಮಂಗಳೂರು ಕಮಿಷನರೇಟ್ ಬಳಿಕ ಜಿಲ್ಲಾ ಪೊಲೀಸ್ ಇಲಾಖೆಗೆ ಸರ್ಜರಿ ಮಾಡಲಾಗಿದ್ದು, ಜಿಲ್ಲೆಯ ವಿವಿಧ ಠಾಣೆಗಳ 116 ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ.
ತಳ ಮಟ್ಟದಲ್ಲಿಯೂ ಭಾರಿ ಸರ್ಜರಿಗೆ ಮುಂದಾದ ಎಸ್ಪಿ ಡಾ. ಅರುಣ್ ಕೆ. ಅವರು ಪೊಲೀಸರನ್ನು ವರ್ಗಾವಣೆ ಮಾಡಿದ್ದಾರೆ. ವಿವಿಧ ಠಾಣೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 7 ಜನ ಎಎಸ್ಐ, 31 ಹೆಡ್ ಕಾನ್ಸ್ಟೇಬಲ್, 78 ಕಾನ್ಸ್ಟೆಬಲ್ ಗಳನ್ನು ವರ್ಗಾವಣೆ ಮಾಡಲಾಗಿದೆ.
ಆಡಳಿತಾತ್ಮಕ, ಸಾರ್ವಜನಿಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಎರಡು ಭೀಕರ ಹತ್ಯೆಗಳ ಬಳಿಕ ಪೊಲೀಸ್ ಇಲಾಖೆಗೆ ಭಾರೀ ಸರ್ಜರಿಯನ್ನೇ ಮಾಡಲಾಗಿದೆ. ಕೆಲವು ಪೊಲೀಸ್ ಅಧಿಕಾರಿಗಳು ಕಾನ್ಸ್ಟೆಬಲ್ ಗಳು 5 ವರ್ಷಕ್ಕೂ ಹೆಚ್ಚು ಕಾಲ ಒಂದೇ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ವಿವಿಧ ಠಾಣೆಗಳಿಗೆ ವರ್ಗಾವಣೆ ಮಾಡಲಾಗಿದೆ.