ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. ಇತ್ತೀಚೆಗಷ್ಟೇ 25ಕ್ಕೂ ಹೆಚ್ಚು ಹಿರಿಯ ಅಧಿಕಾರಿಗಳ ವರ್ಗಾವಣೆ, ಬಡ್ತಿ ನೀಡಿದ್ದ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ ಡಿವೈಎಸ್ಪಿ ಮತ್ತು ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿದೆ.
ಪೊಲೀಸ್ ಇಲಾಖೆಯ ಸಿವಿಲ್ ವೃಂದದ 23 ಮಂದಿ ಡಿವೈಎಸ್ಪಿಗಳು, 53 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 27 ಮಂದಿ ಸಬ್ ಇನ್ಸ್ ಪೆಕ್ಟರ್ ಗಳಿಗೆ ಇನ್ಸ್ ಪೆಕ್ಟರ್ ಹುದ್ದೆಗೆ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಯಾದ ಡಿವೈಎಸ್ಪಿಗಳು ಮತ್ತು ಇನ್ಸ್ ಪೆಕ್ಟರ್ ಗಳು ನಿಯೋಜಿತ ಸ್ಥಳದಲ್ಲಿ ತಕ್ಷಣವೇ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶಿಸಲಾಗಿದೆ.

