HomeIndiaಶಬರಿಮಲೆಯಲ್ಲಿ ಮಕರ ಜ್ಯೋತಿ ವೀಕ್ಷಣೆಗೆ ಸಕಲ ಸಿದ್ಧತೆ

ಶಬರಿಮಲೆಯಲ್ಲಿ ಮಕರ ಜ್ಯೋತಿ ವೀಕ್ಷಣೆಗೆ ಸಕಲ ಸಿದ್ಧತೆ

ಕಾಸರಗೋಡು: ಕೇರಳದ ಪ್ರಸಿದ್ಧ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ ಮಕರ ಸಂಕ್ರಾಂತಿ ವಿಶೇಷ ಪೂಜಾ ಕಾರ್ಯಗಳು ಆರಂಭವಾಗಿವೆ.

ಮಕರ ಜ್ಯೋತಿ ಉತ್ಸವದ ಅಂಗವಾಗಿ ಅಯ್ಯಪ್ಪ ಸ್ವಾಮಿ ವಿಗ್ರಹಕ್ಕೆ ತೊಡಿಸುವ ಪವಿತ್ರ ಆಭರಣಗಳ ಶೋಭಾಯಾತ್ರೆ ಗುರುವಾರ ಪಂದಳ ಅರಮನೆಯಿಂದ ಆರಂಭವಾಗಿದೆ. ಕಾಡುದಾರಿಯ ಮೂಲಕ ಆಭರಣ ಶೋಭಾಯಾತ್ರೆ ಸಾಗಲಿದ್ದು ಜನವರಿ 14ರಂದು ಅಯ್ಯಪ್ಪ ಸ್ವಾಮಿ ಸನ್ನಿಧಾನ ತಲುಪಲಿದೆ. ಸಂಜೆ ಆವರಣ ಪೆಟ್ಟಿಗೆಗಳನ್ನು ಗರ್ಭಗುಡಿಗೆ ಕೊಂಡೊಯ್ದು ಸ್ವಾಮಿಯ ವಿಗ್ರಹಕ್ಕೆ ಆಭರಣ ತೊಡಿಸಿ ಅಲಂಕಾರ, ವಿಶೇಷ ಪೂಜೆ, ದೀಪಾರಾಧನೆ ನೆರವೇರಿಸಲಾಗುತ್ತದೆ. ನಂತರ ಕಾಂತಮಲೆಯಲ್ಲಿ ಮಕರ ಜ್ಯೋತಿ ಪ್ರಜ್ವಲಿಸಲಿದ್ದು, ಅಪಾರ ಸಂಖ್ಯೆಯ ಭಕ್ತರು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular