HomeKarnatakaಮಕರ ಸಂಕ್ರಾಂತಿ : ಇಂದು ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗವನ್ನು ಸ್ಪರ್ಶಿಸಲಿದೆ 'ಸೂರ್ಯರಶ್ಮಿ'

ಮಕರ ಸಂಕ್ರಾಂತಿ : ಇಂದು ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗವನ್ನು ಸ್ಪರ್ಶಿಸಲಿದೆ ‘ಸೂರ್ಯರಶ್ಮಿ’

ಬೆಂಗಳೂರು : ಇಂದು(ಜ.15) ರಾಜ್ಯಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ. ಎಲ್ಲಾ ಕಡೆ ಇಂದು ಬಹಳ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಾರೆ. ರಾಜ್ಯದ ಹಲವು ದೇವಾಲಯಗಳಲ್ಲಿ ಇಂದು ವಿಶೇಷ ಪೂಜೆ ನಡೆಯಲಿದೆ.

ಬೆಂಗಳೂರಿನ ಬಸವನಗುಡಿಯಲ್ಲಿರುವ ಶ್ರೀ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಶಿವನಿಗೆ ಇಂದು ವಿಶೇಷ ಅಭಿಷೇಕ ಮಾಡಲಾಗುತ್ತದೆ. ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ 5:20 ರಿಂದ 5:23 ರವರೆಗೆ  ಸೂರ್ಯದೇವ ಶಿವಲಿಂಗವನ್ನು ಸ್ಪರ್ಶಿಸಲಿದ್ದಾನೆ. ಈ ಐತಿಹಾಸಿಕ ದೃಶ್ಯವನ್ನು ಸಾವಿರಾರು ಜನರು ಕಣ್ತುಂಬಿಕೊಳ್ಳಲು ದೇವಾಲಯಕ್ಕೆ ಆಗಮಿಸುತ್ತಾರೆ.

ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಸೂರ್ಯರಶ್ಮಿಯಿಂದ ಪುಳಕಿತನಾದ ಶಿವನನ್ನು ಕಣ್ತುಂಬಿಕೊಳ್ಳಲು ಭಕ್ತರಿಗೆ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಇಂದು ಶ್ರೀ ಗವಿಗಂಗಾಧರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಗುವುದು. ಬೆಳಗ್ಗೆಯಿಂದಲೇ ಭಕ್ತರು ದರ್ಶನಕ್ಕೆ ಬರಲಿದ್ದು, ದೇವಾಲಯದಲ್ಲಿ ಸಕಲ ವ್ಯವಸ್ಥೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular