HomeKarnatakaಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: 1.5 ಲಕ್ಷ ಭಕ್ತರು ಭಾಗಿ ಸಾಧ್ಯತೆ

ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: 1.5 ಲಕ್ಷ ಭಕ್ತರು ಭಾಗಿ ಸಾಧ್ಯತೆ

ಶಬರಿಮಲೆ: ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಇಂದು ಮಕರ ಜ್ಯೋತಿ ದರ್ಶನವಾಗಲಿದೆ.

ಸಂಕ್ರಾಂತಿ ಪ್ರಯುಕ್ತ ವಿಶೇಷ ಪೂಜೆ, ದರ್ಶನ ಪಡೆಯಲು 1.5 ಲಕ್ಷ ಭಕ್ತರು ಭಾಗವಹಿಸಿದ್ದಾರೆ. ಸಂಜೆ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ದರ್ಶನವಾಗಲಿದ್ದು, ಇದನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾತರರಾಗಿದ್ದಾರೆ. ಸಂಜೆ 6 ಗಂಟೆಯಿಂದ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಜನವರಿ 19ರಂದು ಮಕರವಿಳಕ್ಕು ಹಬ್ಬ ಮುಕ್ತಾಯವಾಗಲಿದೆ. ಈಗಾಗಲೇ ಲಕ್ಷಾಂತರ ಭಕ್ತರು ಮಕರ ಜ್ಯೋತಿ ದರ್ಶನಕ್ಕಾಗಿ ಶಬರಿಮಲೆಗೆ ಆಗಮಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular