HomeIndiaಸೊಸೆಗೆ ನಿಂದಿಸುವುದು, ಟಿವಿ ನೋಡಬೇಡ ಎನ್ನುವುದು, ಕಸ ಗುಡಿಸುವಂತೆ ಒತ್ತಾಯಿಸುವುದು ಕ್ರೌರ್ಯವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಸೊಸೆಗೆ ನಿಂದಿಸುವುದು, ಟಿವಿ ನೋಡಬೇಡ ಎನ್ನುವುದು, ಕಸ ಗುಡಿಸುವಂತೆ ಒತ್ತಾಯಿಸುವುದು ಕ್ರೌರ್ಯವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಮುಂಬೈ: ಸೊಸೆಯನ್ನು ಕಾರ್ಪೆಟ್ ಮೇಲೆ ಮಲಗುವಂತೆ ಮಾಡುವುದು, ಟಿವಿ ನೋಡಲು ನಿರ್ಬಂಧ ಹೇರುವುದು ಕ್ರೌರ್ಯವಲ್ಲ ಎಂದು ಬಾಂಬೆ ಹೈಕೋರ್ಟ್ ಔರಂಗಾಬಾದ್ ಪೀಠ ತೀರ್ಪು ನೀಡಿದೆ.

2003ರಲ್ಲಿನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವೊಂದರಲ್ಲಿ ಪತಿ ಹಾಗೂ ಆತನ ಕುಟುಂಬದ ಸದಸ್ಯರಿಗೆ ಅಧೀನ ನ್ಯಾಯಾಲಯ ವಿಧಿಸಿದ ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಭಯ್ ಎಸ್. ವಾಗ್ವಾಸೆ ಅವರಿದ್ದ ಏಕಸದಸ್ಯ ಪೀಠ ಈ ರೀತಿ ಅಭಿಪ್ರಾಯಪಟ್ಟಿದೆ.

ಪ್ರಕರಣದಲ್ಲಿ ಪತಿ ಮತ್ತು ಅವರ ಕುಟುಂಬ ಸದಸ್ಯರನ್ನು ಕೋರ್ಟ್ ಖುಲಾಸೆಗೊಳಿಸಿದೆ. ವಾದ -ಪ್ರತಿವಾದ ಆಲಿಸಿದ ಹೈಕೋರ್ಟ್ ಪೀಠ ಸೊಸೆಯನ್ನು ನಿಂದಿಸುವುದು, ಟಿವಿ ವೀಕ್ಷಣೆಗೆ ಅವಕಾಶ ನೀಡದಿರುವುದು, ದೇವಸ್ಥಾನಕ್ಕೆ ಏಕಾಂಗಿಯಾಗಿ ಹೋಗುವುದನ್ನು ನಿಷೇಧಿಸುವುದು, ಕಸಗುಡಿಸುವಂತೆ ಒತ್ತಾಯಿಸುವುದು, ಕಾರ್ಪೆಟ್ ಮೇಲೆ ಮಲಗುವಂತೆ ಮಾಡುವುದು ಕ್ರೌರ್ಯವಲ್ಲ. ಇಂತಹ ಆರೋಪಗಳು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498 ಎ ಮತ್ತು 306ರ ಅಡಿಯಲ್ಲಿ ಕಠಿಣ ಕ್ರಮಗಳಿಗೆ ಸಮನಾಗಿರುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular