BREAKING : ಮಲೈ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ : ವರನಟ ಡಾ.ರಾಜ್ ಕುಮಾರ್ ಗೆ ಗೌರವ.!

ಚಾಮರಾಜನಗರ: ಮಲೈ ಮಹದೇಶ್ವರ ಬೆಟ್ಟದಲ್ಲಿ ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ವರನಟ ಡಾ.ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸಲಾಗಿದೆ.

ಮಹದೇಶ್ವರ ಬೆಟ್ಟದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಚಿವ ಸಂಪುಟ ಸಭೆಯ ಸಭಾಂಗಣದ ಪಕ್ಕದಲ್ಲಿ ಸಿದ್ಧಪಡಿಸಿರುವ ಮಾಅಧ್ಯಮಗೋಷ್ಠಿ ಸ್ಥಳದಲ್ಲಿ ರಾಜಕುಮಾರ್ ಅವರ ಫೋಟೋ ಇಟ್ಟು ಪುಷ್ಪಾಲಂಕಾರ ಮಾಡಲಾಗಿದೆ.

ಈ ಮೂಲಕ ಜನ್ಮದಿನದ ಅಂಗವಾಗಿ ವರನಟನನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಡಾ.ರಾಜ್ ಕುಮಾರ್ ಅವರು ಚಾಮರಾಜನಗರ ಜಿಲ್ಲೆಯವರೇ ಆಗಿದ್ದರಿಂದ ಚಾಮರಾಜನಗರದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಈ ವೇಶೇಷ ಗೌರವ ನಮನ ಸಲ್ಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read