ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೈ ಮಹದೇಶ್ವರ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಮಹದೇಶ್ವರ ಸ್ವಾಮಿ ಮತ್ತೆ ಕೋಟ್ಯಾಧಿಪತಿಯಾಗಿದ್ದಾರೆ.
ಈ ಬಾರಿ ಕೇವಲ 28 ದಿನಗಳಲ್ಲಿ 1.94 ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಹುಂಡಿಯಲ್ಲಿ ಹಣ ಮಾತ್ರವಲ್ಲ 63 ಗ್ರಾಂ ಚಿನ್ನ, ಅರ್ಧ ಕೆಜಿ ಬೆಳ್ಳಿ ಸಂಗ್ರಹವಾಗಿದೆ.
ದೇವಸ್ಥಾನದ ಪ್ರಾಧಿಕಾರದಿಂದ ಹುಂಡಿ ಎಣಿಕೆ ಕಾರ್ಯ ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ರಘು ನೇತೃತ್ವದಲ್ಲಿ ನಡೆಯಿತು.