HomeKarnatakaಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದಾಗ ದುರಂತ: ನೀರಿನಲ್ಲಿ ಮುಳುಗಿ ಬಾಲಕ ಸಾವು

ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದಾಗ ದುರಂತ: ನೀರಿನಲ್ಲಿ ಮುಳುಗಿ ಬಾಲಕ ಸಾವು

ಬೆಳಗಾವಿ: ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಹೊರವಲಯದಲ್ಲಿ ನಡೆದಿದೆ.

15 ವರ್ಷದ ಮಹೇಶ್ ಗಣಾಚಾರಿ ಮೃತ ಬಾಲಕ. ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬಾಲಕನ ಮೃತದೇಹ ನೀರಿನಿಂದ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಬೈಲಹೊಂಗಲ ಸಿಪಿಐ ಪ್ರಮೋದ ಯಲಿಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular