BIG NEWS: ವಿಷಾಹಾರ ಸೇವಿಸಿ ವಿದ್ಯಾರ್ಥಿ ಸಾವು ಪ್ರಕರಣ: 6 ಜನರ ವಿರುದ್ಧ FIR ದಾಖಲು

ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿ ಸಾವು ಹಾಗೂ ಹಲವರು ಅಸ್ವಸ್ಥಗೊಂಡಿದ್ದ ಪ್ರಕರಣ ಸಂಬಂಧ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಮಳವಳ್ಳಿಯಲ್ಲಿ ಹೋಳಿ ಹಬ್ಬ ಆಯೋಜಿಸಿದ್ದ ಆಯೋಜಕರು, ಆಹಾರ ತಯಾರಕರು, ಶಾಲೆಯ ಮುಖ್ಯಸ್ಥರು ಸೇರಿದಂತೆ 6 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಮಳವಳ್ಳಿ ಪಟ್ಟಣದ ಮದನ್ ಲಾಲ್ ಕಲ್ಯಾಣ ಮಂಟಪದಲ್ಲಿ ಹೋಳಿ ಹಬ್ಬ ಹಿನ್ನೆಲೆಯಲ್ಲಿ ಪುಷ್ಪೇಂದ್ರ ಕುಮಾರ್ ಎಂಬುವವರು ಹೋಳಿ ಹಬ್ಬ ಆಯೋಜಿಸಿದ್ದರು. ಸಿದ್ದರಾಜು ಎಂಬುವವರ ಹೋಟೆಲ್ ನಿದ ವೆಜಿಟೇಬಲ್ ಪಲಾವ್ ಪೂರೈಸಲಾಗಿತ್ತು. ಕಾಗೇಪುರದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಉಳಿದ ಪಲಾವ್ ನೀಡಲಾಗಿತ್ತು. ಪಲಾವ್ ತಿಂದ 29 ವಿದ್ಯಾರ್ಥಿಗಳು ಅಸ್ವಶಗೊಂಡಿದ್ದರು ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದ.

ಹೋಳಿ ಹಬ್ಬದಲ್ಲಿ ಭಾಗಿಯಾಗಿದ್ದ 30ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ಸೇರಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read