HomeEntertainmentBIG NEWS: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಬೈಕ್ ಗೆ ಡಿಕ್ಕಿ: ಖ್ಯಾತ ನಟ ಬೈಜು...

BIG NEWS: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಬೈಕ್ ಗೆ ಡಿಕ್ಕಿ: ಖ್ಯಾತ ನಟ ಬೈಜು ಸಂತೋಷ್ ಅರೆಸ್ಟ್

ತಿರುವನಂತಪುರಂ: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಬೈಕ್ ಗೆ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಳಂ ಖ್ಯಾತ ನಟ ಬೈಜು ಸಂತೋಷ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕೌಡಿಯಾರ್-ವೆಲ್ಲಯಂಬಲಂ ರಸ್ತೆಯಲ್ಲಿ ತಡರಾತ್ರಿ ನಟ ಬೈಜು ಸಂತೋಷ್ ಓಡಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ನಟನ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ಪೊಲೀಸರು ಬೈಜು ಸಂತೋಷ್ ಅವರನ್ನು ಬಂಧಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಬೈಜು ಅವರನ್ನು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular