BREAKING: ಖ್ಯಾತ ನಟ, ಸೂಪರ್ ಸ್ಟಾರ್ ಮೋಹನ್ ಲಾಲ್ ಆಸ್ಪತ್ರೆಗೆ ದಾಖಲು

ಕೊಚ್ಚಿ: ಮಲಯಾಳಂ ಹಿರಿಯ ನಟ ಮೋಹನ್‌ಲಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವು ಸೇರಿದಂತೆ ಆರೋಗ್ಯ ತೊಂದರೆ ಕಾರಣ ಅವರನ್ನು ಕೊಚ್ಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಧಿಕೃತ ವೈದ್ಯಕೀಯ ಹೇಳಿಕೆಯ ಪ್ರಕಾರ, ನಟನಿಗೆ ವೈರಲ್ ಉಸಿರಾಟದ ಸೋಂಕು ಇದೆ ಎಂದು ಶಂಕಿಸಲಾಗಿದೆ. 64 ವರ್ಷ ವಯಸ್ಸಿನ ಮೋಹನ್ ಲಾಲ್ ಅವರಿಗೆ ಐದು ದಿನಗಳವರೆಗೆ ವಿಶ್ರಾಂತಿಗೆ ತಿಳಿಸಲಾಗಿದೆ. ಸಾರ್ವಜನಿಕ ಭೇಟಿ ತಪ್ಪಿಸಲು ಮತ್ತು ಸೂಚಿಸಲಾದ ಔಷಧಿ ಸೂಚನೆ ಅನುಸರಿಸಲು ಸಲಹೆ ನೀಡಲಾಗಿದೆ.

‘ಎಲ್ 2: ಎಂಪುರಾನ್’ ಮತ್ತು ಅವರ ನಿರ್ದೇಶನದ ಚೊಚ್ಚಲ ‘ಬರೋಜ್’ ನ ಪೋಸ್ಟ್-ಪ್ರೊಡಕ್ಷನ್ ಚಿತ್ರೀಕರಣವನ್ನು ಮುಗಿಸಿದ ನಂತರ, ಮೋಹನ್ ಲಾಲ್ ಗುಜರಾತ್‌ನಿಂದ ಕೊಚ್ಚಿಗೆ ಮರಳಿದರು. ಅಲ್ಲಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತು. ಚಿಕಿತ್ಸೆ ಬಳಿಕ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

https://twitter.com/sri50/status/1825065861109194871

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read