ಶುಕ್ರವಾರ ಬೆಳಿಗ್ಗೆ ತಮಿಳುನಾಡು ಬಳಿ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅವರ ಕುಟುಂಬದ ಕಾರು ಅಪಘಾತಕ್ಕೀಡಾಗಿದೆ.
ಅಪಘಾತದಲ್ಲಿ ಅವರ ತಂದೆ 70 ವರ್ಷದ ಸಿಬಿ ಚಾಕೊ ಸ್ಥಳದಲ್ಲೇ ಸಾವನ್ನಪ್ಪಿದರೆ, ಶೈನ್ ಹಾಗೂ ಅವರ ತಾಯಿಗೆ ಗಂಭೀರ ಗಾಯಗಳಾಗಿವೆ.
ಅಪಘಾತದ ಸಮಯದಲ್ಲಿ, ಶೈನ್ ಅವರ ತಾಯಿ, ಸಹೋದರ, ತಂದೆ ಮತ್ತು ಚಾಲಕನೊಂದಿಗೆ ಪ್ರಯಾಣಿಸುತ್ತಿದ್ದರು. ಶೈನ್ ಮತ್ತು ಅವರ ತಾಯಿಯನ್ನು ಧರ್ಮಪುರಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು, ವೈದ್ಯರು ಅವರ ಗಾಯಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ವರದಿಗಳ ಪ್ರಕಾರ, ಅವರ ಸಹೋದರ ಮತ್ತು ಕಾರು ಚಾಲಕ ಕೂಡ ಗಾಯಗೊಂಡಿದ್ದಾರೆ. ಬೆಳಿಗ್ಗೆ 7 ಗಂಟೆ ಸುಮಾರಿಗೆ ತಮಿಳುನಾಡಿನ ಧರ್ಮಪುರಿಯ ಪಾಲಕೊಟ್ಟೈ ಬಳಿ ಅವರ ಕಾರು ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
You Might Also Like
TAGGED:‘ಶೈನ್ ಟಾಮ್ ಚಾಕೋ’