ವಿಮಾನದಲ್ಲಿ ನಟಿ ಮೈಮುಟ್ಟಿ ಕಿರುಕುಳ: ಪಾನಮತ್ತ ಪ್ರಯಾಣಿಕನ ವಿರುದ್ಧ ದೂರು ದಾಖಲು

ನವದೆಹಲಿ : ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವಾಗ ಸಹ ಪ್ರಯಾಣಿಕರೊಬ್ಬರು ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಲಯಾಳಂ ನಟಿ ದಿವ್ಯಾಪ್ರಭಾ ಕೇರಳ ಪೊಲೀಸರಿಗೆ ದೂರು ನೀಡಿದ್ದಾರೆ.

ಅಕ್ಟೋಬರ್ 9 ರಂದು ಮುಂಬೈನಿಂದ ಕೊಚ್ಚಿಗೆ ತೆರಳುತ್ತಿದ್ದ ಎಐ 681 ವಿಮಾನದಲ್ಲಿ ನಡೆದ ಘಟನೆಯನ್ನು ಇನ್ಸ್ಟಾಗ್ರಾಮ್ ನಲ್ಲಿ ಅವರು ಹಂಚಿಕೊಂಡಿದ್ದಾರೆ. ಪಾನಮತ್ತನಾದ ವ್ಯಕ್ತಿಯೊಬ್ಬ ನನ್ನ ಜೊತೆ ದೈಹಿಕ ಸಂಪರ್ಕ ಸೇರಿದಂತೆ ಕೆಟ್ಟದಾಗಿ ವರ್ತಿಸಿದ್ದಾರೆ’ ಎಂದು ಅವರು ಆರೋಪಿಸಿದರು. ನನ್ನ ಜತೆ ವಾದ ಮಾಡುವ ಜತೆಗೆ ಮೈಮುಟ್ಟಲು ಬಂದಿದ್ದಾನೆ. ಗಗನಸಖಿಯರಿಗೆ ಈ ವಿಷಯ ತಿಳಿಸಿದ ಬಳಿಕ ನನಗೆ ಬೇರೆ ಆಸನ ನೀಡಲಾಯಿತು ಎಂದಿದ್ದಾರೆ.  ವಿಮಾನಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮಗಳಿಗೆ ದಿವ್ಯಾ ಕರೆ ನೀಡಿದ್ದಾರೆ.

ಈ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ ಕೇರಳ ಪೊಲೀಸರಿಗೆ ನಾನು ಔಪಚಾರಿಕ ದೂರು ಸಲ್ಲಿಸಿದೆ ಎಂದು ಅವರು ಕೇರಳ ಪೊಲೀಸರಿಗೆ ಸಲ್ಲಿಸಿದ ದೂರಿನ ಸ್ಕ್ರೀನ್ ಶಾಟ್ ನೊಂದಿಗೆ ಇನ್ಸ್ಟಾಗ್ರಾಮ್ ನಲ್ಲಿ ಅವರು ಹಂಚಿಕೊಂಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read