HomeIndiaBREAKING: ಮೊದಲ ದ್ವಿಪಕ್ಷೀಯ ಭೇಟಿಗಾಗಿ ಭಾರತಕ್ಕೆ ಆಗಮಿಸಿದ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು

BREAKING: ಮೊದಲ ದ್ವಿಪಕ್ಷೀಯ ಭೇಟಿಗಾಗಿ ಭಾರತಕ್ಕೆ ಆಗಮಿಸಿದ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು

ನವದೆಹಲಿ: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಮತ್ತು ಮಾಲ್ಡೀವ್ಸ್‌ನ ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರು ತಮ್ಮ ಮೊದಲ ದ್ವಿಪಕ್ಷೀಯ ಭೇಟಿಗಾಗಿ ಭಾರತಕ್ಕೆ ಭಾನುವಾರ ಆಗಮಿಸಿದರು.

ಈ ಭೇಟಿಯ ವೇಳೆ ಅಧ್ಯಕ್ಷ ಮುಯಿಝು ಅವರು ಅಧ್ಯಕ್ಷ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ದೆಹಲಿ ಆಗಮಿಸಿದ ಅವರನ್ನು ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಸ್ವಾಗತಿಸಿದರು. ಅಧ್ಯಕ್ಷ ದ್ರೌಪದಿ ಮುರ್ಮು ಅವರ ಅಧಿಕೃತ ಆಹ್ವಾನದ ಮೇರೆಗೆ ಅಕ್ಟೋಬರ್ 6-10 ರವರೆಗೆ ಮುಯಿಝು ಭಾರತ ಪ್ರವಾಸ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತೀಚೆಗೆ, ನ್ಯೂಯಾರ್ಕ್‌ನಲ್ಲಿ 79 ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ವೇಳೆ ಅವರು ಸಾಧ್ಯವಾದಷ್ಟು ಬೇಗ ಭಾರತಕ್ಕೆ ಭೇಟಿ ನೀಡಲು ಯೋಜಿಸುತ್ತಿದ್ದೇನೆ ಎಂದು ತಿಳಿಸಿದ್ದು, ನಾವು ಅತ್ಯಂತ ಬಲವಾದ ದ್ವಿಪಕ್ಷೀಯ ಸಂಬಂಧವನ್ನು ಹೊಂದಿದ್ದೇವೆ ಎಂದು ತಿಳಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular