ಭಕ್ತರ ವೇಷದಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದು ಶ್ರೀಗಂಧ ಕಳ್ಳತನ: ಓರ್ವ ಆರೋಪಿ ಅರೆಸ್ಟ್

ಚಾಮರಾಜನಗರ: ಭಕ್ತರ ವೇಷದಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದು ಶ್ರೀಗಂಧ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ತಮಿಳುನಾಡು ಮೂಲದ ಸೆಡೆಯಾನ್ ಬಂಧಿತ ಆರೋಪಿ. ಮಲೆ ಮಹದೇಶ್ವರ ಬೆಟ್ಟದ ಆನೆತಲೆದಿಂಬ ಬಳಿ ಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತನಿಂದ 33 ಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಇದೇ ವೇಳೆ ಮತ್ತೊಂದು ಪ್ರಕರಣದಲ್ಲಿ ಹನೂರು ಬಳಿ ಕೊಕ್ಕಬೋರ ದೊಡ್ಡ ಬರೇಹಳ್ಳದ ಬಳಿ ಶ್ರೀಗಂಧದ ಮರ ಕಡಿಯುತ್ತಿದ್ದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಓರ್ವ ಅಪ್ರಾಪ್ತನನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರು ಪರಾರಿಯಾಗಿದ್ದಾರೆ. ಪೆರುಮಾಳ್ ಹಾಗೂ ಮುರುಗನ್ ಪರಾರಿಯಾಗಿರುವ ಕಳ್ಳರು.

ಕಳ್ಳರು ಭಕ್ತರ ಸೋಗಿನಲ್ಲಿ ಬೆಟ್ಟಕ್ಕೆ ಬಂದು ಬಳಿಕ ಮಹದೇಶ್ವರ ಬೆಟ್ಟದ ವನ್ಯಧಾಮದ ಮೀಸಲು ಅರಣ್ಯ ಪ್ರದೇಶ ಪ್ರವೇಶಿಸುತ್ತಿದ್ದರು. ಅಲ್ಲಿ ಗಂಧದ ಮರಗಳನ್ನು ಕತ್ತರಿಸಿ ಕೊಂಡೊಯ್ಯುತ್ತಿದ್ದರು ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read