ಚಾಮರಾಜನಗರ: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ನಾಡಿನಾದ್ಯಂತ ಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಎಲ್ಲೆಲ್ಲೂ ಶಿವ ನಾಮಸ್ಮರಣೆ, ಜಪ ತಪ, ಪೂಜೆ ಪುನಸ್ಕಾರಗಳು ನಡೆಯುತ್ತಿವೆ. ಶಿವರತರಿ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ ಶಿವಕುಮಾರ್ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಹದೇಶ್ವರನ ದರ್ಶನ ಪಡೆದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ ಉಷಾ ಶಿವಕುಮಾರ್, ಮಹದೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸಾಲೂರು ಮಠಕ್ಕೆ ಭೇಟಿ ನೀಡಿದರು.
ಸಾಲೂರು ಶ್ರೀಗಳ ಆಶಿರ್ವಾದ ಪಡೆದರು. ಈ ವೇಳೆ ಸಾಲೂರು ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಮಹದೇಶ್ವರನಿಗೆ ವಿಶೇಷ ಪೂಜೆ, ಅಭಿಷೇಕ ಮಾಅಡಲಾಗುತ್ತಿದೆ. ಮಹದಪ್ಪನ ಗರ್ಭಗುಡಿಗೆ ಫಲಪುಷ್ಪಗಳಲ್ಲಿ ವಿಶೇಶ ಅಲಂಕಾರ ಮಾಡಲಾಗಿದೆ.

