ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದೆ.
ಇಲ್ಲಿನ ಜೇನುಮಲೆ ಹಾಗೂ ವಜ್ರಮಲೆ ಅತಿಥಿಗೃಹಗಳ ಎದುರಿನ ಖಾಲಿ ಜಗದಲ್ಲಿ ಹಾಕಿರುವ ಜರ್ಮನ್ ಟೆಂಟ್ ನಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಆರಂಭವಾಗಿರುವ ಸಂಪುಟ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ಸಚಿವರು ಭಾಗಿಯಾಗಿದ್ದಾರೆ.
ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ಜರ್ಮನ್ ಟೆಂಟ್ ನಲ್ಲಿ ನಡೆಯುತ್ತಿರುವುದು ವಿಶೇಷ. ಚಾಮರಾಜನಗರದಲ್ಲಿ ಈ ಹಿಂದೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ಕಾರಣಾಂತರಗಳಿಂದಾಗಿ ಮೂರು ಬಾರಿ ಮುಂದೂಡಿಕೆಯಾಗಿತ್ತು. ನಾಲ್ಕನೇ ಬಾರಿಗೆ ಸಾಕಾರಗೊಂಡಿದೆ.