HomeKarnatakaBIG NEWS: ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಚಿರತೆ ದಾಳಿ: ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಬಾಲಕನನ್ನು ತಿಂದು ತೇಗಿದ...

BIG NEWS: ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಚಿರತೆ ದಾಳಿ: ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಬಾಲಕನನ್ನು ತಿಂದು ತೇಗಿದ ನರಭಕ್ಷಕ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ನರಭಕ್ಷಕ ಚಿರತೆ ದಾಳಿ ಮಾಡಿದ್ದು, ಚಿರತೆ ದಾಳಿಗೆ ೮ ವರ್ಷದ ಬಾಲಕ ಬಲಿಯಾಗಿದ್ದಾನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ಪೋಷಕರೊಂದಿಗೆ ಪಾದಯಾತ್ರೆ ತೆರಳುತ್ತಿದ್ದ ಬಾಲಕ ಚಿರತೆ ದಾಳಿಯಲ್ಲಿ ಬಲಿಯಾಗಿದ್ದಾನೆ.

ಇದೇ ಜನವರಿ ಮತ್ತು ಫೆಬ್ರವರಿಯಲ್ಲಿ ಚಿರತೆ ದಾಳಿಗೆ ಎರಡು ಜೀವಗಳು ಬಲಿಯಾಗಿದ್ದವು. ಈಗ ಮತ್ತೊಮ್ಮೆ ಅಂತದ್ದೇ ಭೀಕರ ಘಟನೆ ನಡೆದಿದ್ದು, ಬೆಂಗಳೂರು ಮೂಲದ ಎಂಟು ವರ್ಷದ ಬಾಲಕ ಹರ್ಷಿತ್ ಚಿರತೆ ದಾಳಿಗೆ ಬಲಿಯಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹರ್ಷಿತ್ ತನ್ನ ಪೋಷಕರೊಂದಿಗೆ ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಪಾದಯಾತ್ರೆ ತೆರಳುತ್ತಿದ್ದ. ಇಂದು ಮುಂಜಾನೆ ಸುಮಾರು 7 ಗಂಟೆಯ ವೇಳೆಗೆ ದಟ್ಟ ಅರಣ್ಯದ ಹಾದಿಯಲ್ಲಿ ಸಾಗುತ್ತಿದ್ದಾಗ, ಪೊದೆಯಲ್ಲಿ ಹೊಂಚು ಹಾಕಿದ್ದ ಚಿರತೆ ಕ್ಷಣಾರ್ಧದಲ್ಲಿ ಬಾಲಕನ ಮೇಲೆ ದಾಳಿ ಮಾಡಿ ಕಾಡಿನೊಳಗೆ ಎಳೆದೊಯ್ದಿದೆ. ಕುಟುಂಬಸ್ಥರು ಕಿರುಚಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ನಂತರ ಬಾಲಕನ ಮೃತದೇಹ ಪತ್ತೆಯಾಗಿದ್ದು, ಚಿರತೆಯು ಬಾಲಕನನ್ನು ಕೊಂದು ತಿಂದು ತೇಗಿದೆ. ದೇಹದ ಕೆಲವು ಭಾಗಗಳನ್ನು ಭಕ್ಷಿಸಿರುವುದು ಕಂಡುಬಂದಿದೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಮತ್ತು ಮಲೆ ಮಹದೇಶ್ವರ ಬೆಟ್ಟದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಪಾದಯಾತ್ರೆ ಕೈಗೊಳ್ಳುವ ಯಾತ್ರಿಕರಲ್ಲಿ ಭೀತಿ ಹುಟ್ಟಿಸಿದೆ.

ಜನವರಿ 21ರಂದು ಮಂಡ್ಯ ಜಿಲ್ಲೆಯ ಚೀರನಹಳ್ಳಿಯ ಪ್ರವೀಣ್ ಎಂಬ ಭಕ್ತ ತಾಳುಬೆಟ್ಟದ ಬಳಿ ಚಿರತೆ ದಾಳಿಗೆ ಬಲಿಯಾಗಿದ್ದರು. ಇದಾದ ಬೆನ್ನಲ್ಲೇ ಫೆಬ್ರವರಿಯಲ್ಲಿ ಚನ್ನಪಟ್ಟಣದ ಶ್ರೇಯಸ್ (8) ಎಂಬ ಬಾಲಕನ ಮೇಲೆಯೂ ಇದೇ ಮಾರ್ಗದಲ್ಲಿ ಚಿರತೆ ದಾಳಿ ನಡೆಸಿತ್ತು. ಅದೃಷ್ಟವಶಾತ್ ಆತ ಬದುಕುಳಿದಿದ್ದ. ಈ ಹಿಂದೆ ಟಿ. ನರಸೀಪುರ ಮತ್ತು ಹನೂರು ಭಾಗಗಳಲ್ಲಿ ಸರಣಿ ಸಾವುಗಳು ಸಂಭವಿಸಿದ್ದು, ಅರಣ್ಯ ಇಲಾಖೆ ‘ಲೆಪರ್ಡ್ ಟಾಸ್ಕ್ ಫೋರ್ಸ್’ ಮೂಲಕ ಕಾರ್ಯಾಚರಣೆ ನಡೆಸಿ ನರಭಕ್ಷಕ ಚಿರತೆಗಳನ್ನು ಸೆರೆಹಿಡಿದಿತ್ತು. ಇದೆಲ್ಲದರ ಬೆನ್ನಲ್ಲೇ ಮತ್ತೊಮ್ಮೆ ಇದೇ ಮಾರ್ಗದಲ್ಲಿ ಚಿರತೆ ಬಾಲಕನನ್ನು ಬಲಿ ಪಡೆದಿರುವುದು ಆತಂಕಕ್ಕೆ ಕಾರಣವಾಗಿದೆ.

ಪದೇ ಪದೇ ಚಿರತೆ ದಾಳಿಗೆ ಜನರು ಬಲಿಯಾಗುತ್ತಿದ್ದರೂ ಮಲೆ ಮಹದೇಶ್ವರ ವನ್ಯಜೀವಿಧಾಮದ ಅಧಿಕಾರಿಗಳು ಸೂಕ್ತ ರಕ್ಷಣೆ ನೀಡುತ್ತಿಲ್ಲ ಎಂದು ಭಕ್ತರು ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular