HomeKarnatakaಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಅದ್ಧೂರಿ ರಥೋತ್ಸವ; ಮಾದಪ್ಪನ ಸನ್ನಿದಿಗೆ ಹರಿದುಬಂದ ಭಕ್ತ ಸಾಗರ

ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಅದ್ಧೂರಿ ರಥೋತ್ಸವ; ಮಾದಪ್ಪನ ಸನ್ನಿದಿಗೆ ಹರಿದುಬಂದ ಭಕ್ತ ಸಾಗರ

ಚಾಮರಾಜನಗರ: ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಅದ್ಧೂರಿ ರಥೋತ್ಸವ ನಡೆಯಲಿದೆ. ರಥೋತ್ಸವ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಭಕ್ತರು ಬೆಟ್ಟಕ್ಕೆ ಹರಿದು ಬರುತ್ತಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಪ್ರಯುಕ್ತ ಎರಡು ದಿನಗಳಿಂದ ವಿಶೇಷ ಪೂಜೆ ನೆರವೇರುತ್ತಿದ್ದು, ಮೂರನೇ ದಿನವಾದ ಇಂದು ರಥೋತ್ಸವ ಜರುಗಲಿದೆ. ಈ ಹಿನ್ನೆಲೆಯಲ್ಲಿ ಮಾಯ್ಕಾರ ಮಾದಪ್ಪನ ಸನ್ನಿದಿಗೆ ಭಕ್ತಸಾಗರವೇ ಹರಿದು ಬರುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೂರಾರು ಭಕ್ತರು ಪಾದಯಾತ್ರೆ ಮೂಲಕ ಬೆಟ್ಟ ಏರುತ್ತಿದ್ದಾರೆ. ಸಾವಿರಾರು ಭಕ್ತರು ವಿವಿಧ ರೀತಿಯ ಹರಕೆಗಳನ್ನು ತೀರಿಸುತ್ತಿದ್ದಾರೆ. ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿರುವುದರಿಂದ ಸಹಜವಾಗಿಯೇ ಹಬ್ಬದ ಸಂದರ್ಭದಲ್ಲಿ ದೇವಾಲಯಗಳಿಗೆ ತೆರಳುವ ಭಕ್ತರ ಸಂಖ್ಯೆ ಹೆಚ್ಚಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular