HomeKarnatakaಮಲೆ ಮಹಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಬಾಲಕನ ಮೇಲೆ ಚಿರತೆ ದಾಳಿ

ಮಲೆ ಮಹಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಬಾಲಕನ ಮೇಲೆ ಚಿರತೆ ದಾಳಿ

ಚಾಮರಾಜನಗರ: ಮಲೆ ಮಹಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ನಡೆದಿದೆ.

ಚನ್ನರಾಯಪಟ್ಟಣದ ಭೂವಳ್ಳಿ ಗ್ರಾಮದ ಶ್ರೇಯಸ್ (8) ಎಂಬಾತನ ಮೇಲೆ ಚಿರತೆ ದಾಳಿ ನಡೆಸಿದೆ. ಬಾಲಕನ ಕಿವಿ, ಕೈಗಳಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಬಾಲಕನ್ನು ರಕ್ಷಿಸಲಾಗಿದೆ.

ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಮಲೆ ಮಹಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಸಾಗುವ ಭಕ್ತರ ಸಂಖ್ಯೆ ಹೆಚ್ಚಿದೆ. ಸಹಸ್ರಾರು ಭಕ್ತರು ಪಾದಯಾತ್ರೆ ಮೂಲಕ ಮಹಾದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾರೆ. ಅದೇರೀತಿ ಬಾಲಕ ಶ್ರೇಯಸ್ ಹಾಗೂ ಕುಟುಂಬದವರು ಕೂಡ ಪಾದಯಾತ್ರೆಯಲ್ಲಿ ಸಾಗುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಪೊನ್ನಾಚಿ ಕ್ರಾಸ್ ನಿಂದ ಮುಂದೆ ಅರಣ್ಯ ಮಾರ್ಗವಾಗಿ ಸಾಗುತ್ತಿದ್ದಾಗ ಹಾಡಹಗಲೇ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದೆ. ಭಕ್ತರ ಗಲಾಟೆ ಕೇಳೆತ್ತಿದ್ದಂತೆ ಚಿರತೆ ಸ್ಥಳದಿಂದ ಓಡಿದೆ. ಅದೃಷ್ಟವಶಾತ್ ಬಾಲಕ ಬಚಾವ್ ಆಗಿದ್ದಾನೆ.

ಗಾಯಾಳು ಬಾಲಕನ್ನು ಬಸ್ ಮೂಲಕವಾಗಿ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿದಲಾಗಿದೆ. ಘಟನಾ ಸ್ಥಳಕ್ಕೆ ಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿ ಪರುಶೀಲನೆ ನಡೆಸಿದ್ದಾರೆ.

ಪಾದಯಾತ್ರೆ ಸಾಗುತ್ತಿದ್ದ ಭಕ್ತರಿಗೆ ಒಂದು ಬೃಹತ್ ಚಿರತೆ ಹಾಗೂ ಮತ್ತೊಂದು ಮರಿ ಚಿರತೆ ಕಾಣಿಸಿಕೊಂಡಿದೆ. ಪಾದಯಾತ್ರೆಯಲ್ಲಿ ತೆರಳುವ ಭಕ್ತರು ಅರಣ್ಯ ಪ್ರದೇಶದ ಮಾರ್ಗ ಬಿಟ್ಟು ಮುಖ್ಯ ರಸ್ತೆ ಮೂಲಕವಾಗಿ ತೆರಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular