ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಪಚ್ಚದೊಡ್ಡಿಯಲ್ಲಿ ಹುಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಆರೋಪಿಗಳಾದ ಪಚ್ಚಮಲ್ಲ ಅಲಿಯಾಸ್ ಸಣ್ಣ, ಗಣೇಶ್ ಹಾಗೂ ಸಂಪು ಎಂಬುವವರನ್ನು ಇಂದು ಹನೂರು ಕೋರ್ಟ್ ಗೆ ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಲಯ ಮೂವರು ಆರೋಪಿಗಳನ್ನು 5 ದಿನಗಳ ಕಾಲ ಅರಣ್ಯ ಇಲಾಖೆ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಗೋವಿಂದೇಗೌಡ, ಕುರಿಗಾಹಿ ಕಂಬಣ್ಣ, ಮಂಜುನಾಥ್ ಎಂಬುವವರನ್ನು ಅರಣ್ಯ ಇಲಾಖೆ ಕೈಬಿಟ್ಟಿದ್ದು, ವಿಚಾರಣೆಗೆ ಕರೆದಾಗ ಬರುವಂತೆ ಸೂಚನೆ ನೀಡಲಾಗಿದೆ. ಈ ಪ್ರಕರಣದಲ್ಲಿ ಈ ಮೂವರು ಸಾಕ್ಷಿಗಳಾಗುವ ಸಾಧ್ಯತೆ ಇದೆ.