BIG NEWS: 27 ದಿನಗಳಲ್ಲಿ ಮಹದೇಶ್ವರನ ಹುಂಡಿಯಲ್ಲಿ ಬರೋಬ್ಬರಿ 2.43 ಕೋಟಿ ಕಾಣಿಕೆ ಸಂಗ್ರಹ

ಚಾಮರಾಜನಗರ: ಇತಿಹಾಸ ಪ್ರಸಿದ್ದ ಮಲೆ ಮಹದೇಶ್ವರ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, 27 ದಿನಗಳಲ್ಲಿ 2 ಕೋಟಿಗೂ ಅಧಿಕ ಕಾಣಿಕೆ ಸಂಗ್ರಹವಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಕಳೆದ 27 ದಿನಗಳಲ್ಲಿ 2.43 ಕೋಟಿ ರೂ ಕಾಣಿಕೆ ಸಂಗ್ರಹವಾಗಿದೆ.

ನಗದು ಹಣದ ಜೊತೆಗೆ 62 ಗ್ರಾಂ ಚಿನ್ನ, 2.51 ಕೆಜಿ ಬೆಳ್ಳಿ ಕೂಡ ಸಂಗ್ರಹವಾಗಿದೆ. ಈ ಬಾರಿ ದೀಪಾವಳಿ ಹಬ್ಬ, ಅಮವಾಸ್ಯೆ, ಕಾರ್ತಿಕ ಸೋಮವಾರ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಭಕ್ತರು ಮಹದೇಶ್ವರನ ಸನ್ನಿಧಾನಕ್ಕೆ ಬಂದು ದರ್ಶನ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಹುಂಡಿ ಕಾಣಿಕೆಯಲ್ಲಿ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read