HomeKarnatakaಮಲೆ ಮಹದೇಶ್ವರ ದೇವಾಲಯದ ಹುಂಡಿ ಎಣಿಕೆ: ಐತಿಹಾಸಿಕ ದಾಖಲೆ

ಮಲೆ ಮಹದೇಶ್ವರ ದೇವಾಲಯದ ಹುಂಡಿ ಎಣಿಕೆ: ಐತಿಹಾಸಿಕ ದಾಖಲೆ

ಚಾಮರಾನಗರ ಜಿಲ್ಲೆ ಹನೂರು ತಾಲೂಕಿನ ಪುಣ್ಯ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನದ ಹುಂಡಿಯಲ್ಲಿ ದಾಖಲೆ ಹಣ ಸಂಗ್ರಹವಾಗಿದೆ. ಶಿವರಾತ್ರಿ ಜಾತ್ರೆಯ ಬಳಿಕ ಹುಂಡಿ ಎಣಿಕೆ ಕಾರ್ಯ ನಡೆದಿದ್ದು 28  ದಿನಗಳ ಅವಧಿಯಲ್ಲಿ 3,41,44,208 ರೂ. ಸಂಗ್ರಹವಾಗಿದ್ದು ಐತಿಹಾಸಿಕ ದಾಖಲೆ ನಿರ್ಮಾಣವಾಗಿದೆ.

ಶ್ರೀ ಮಲೈ ಮಹದೇಶ್ವರಸ್ವಾಮಿ ಅಭಿವೃದ್ದಿ ಕ್ಷೇತ್ರ ಪ್ರಾಧಿಕಾರ ಬುಧವಾರ ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆಸಿದೆ. ಬೆಳಗ್ಗೆ 7 ಗಂಟೆಯಿಂದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು, ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರು ಅವರ ನೇತೃತ್ವದಲ್ಲಿ ಎಣಿಕೆ ಕಾರ್ಯ ಆರಂಭವಾಯಿತು.

ಸಂಜೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು 28 ದಿನಗಳಲ್ಲಿ ಸಂಗ್ರಹವಾದ ಒಟ್ಟು ಮೊತ್ತ ರೂ. 3,41,44,208 (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ 71  ಗ್ರಾಂ ಚಿನ್ನ, 2 ಕೆಜಿ 50 ಗ್ರಾಂ ಬೆಳ್ಳಿ  ಹುಂಡಿಯಲ್ಲಿ ಸಿಕ್ಕಿದೆ. 19 ವಿದೇಶಿ ನೋಟುಗಳು, ಚಾಲ್ತಿಯಲ್ಲಿರದ 2 ಸಾವಿರ ಮುಖ ಬೆಲೆಯ 6 ನೋಟುಗಳನ್ನು ಹುಂಡಿಗೆ ಹಾಕಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಾರಿ ಮಹಾಶಿವರಾತ್ರಿ, ಭಾನುವಾರ, ರಜಾ ದಿನಗಳು ಸೇರಿದಂತೆ ವಿಶೇಷ ದಿನಗಳಲ್ಲಿ ಕೂಡ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಿತ್ತು. ಆದ್ದರಿಂದ ಹುಂಡಿಗೂ ಹೆಚ್ಚಿನ ಹಣ ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯ ಮರಿಸ್ವಾಮಿ, ಕಾಗಲವಾಡಿ ಪ್ರಾಧಿಕಾರದ  ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರ ಮಹದೇವು, ಉಪ ಕಾರ್ಯದರ್ಶಿ ಚಂದ್ರಶೇಖರ .ಜಿ.ಎಲ್, ಲೆಕ್ಕಧೀಕ್ಷಕ ಗುರುಮಲ್ಲಯ್ಯ ಮತ್ತು ದೇವಾಲಯದ ಸಿಬ್ಬಂದಿ ಹಾಜರಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular