HomeKarnatakaಮಲೆ ಮಹದೇಶ್ವರ ಬೆಟ್ಟ ಮಹಾಶಿವರಾತ್ರಿ ಜಾತ್ರೆ: ಭಕ್ತರಿಗ ಬಿಗ್ ಅಪ್‌ಡೇಟ್

ಮಲೆ ಮಹದೇಶ್ವರ ಬೆಟ್ಟ ಮಹಾಶಿವರಾತ್ರಿ ಜಾತ್ರೆ: ಭಕ್ತರಿಗ ಬಿಗ್ ಅಪ್‌ಡೇಟ್

ಮಲೆ ಮಹದೇಶ್ವರ ಬೆಟ್ಟದ ಮಹಾಶಿವರಾತ್ರಿ ಜಾತ್ರೆ-2026ಕ್ಕೆ ಹೋಗುವ ಭಕ್ತರಿಗೆ ಮಹತ್ವದ ಸೂಚನೆ ಇದೆ. ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ನಿಷೇಧಿಸಿ ಚಾಮರಾಜನಗರ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ.

ಫೆಬ್ರವರಿ 13 ರಿಂದ 18, 2026ರ ತನಕ ಮಲೆ ಮಹದೇಶ್ವರ ಬೆಟ್ಟ ರಸ್ತೆ – ಹನೂರು ತಾಲ್ಲೂಕು ಜಾತ್ರೆ ಸಂದರ್ಭ ಭಕ್ತರ ಹೆಚ್ಚಿನ ಸಂಖ್ಯೆಯ ಜನರ ಆಗಮನ, ಅರಣ್ಯ ಪ್ರದೇಶದ ಕಡಿದಾದ ತಿರುವುಗಳು ಹಾಗೂ ವಾಹನ ದಟ್ಟಣೆ ಕಾರಣದಿಂದ ದ್ವಿಚಕ್ರ ವಾಹನಗಳು, ತ್ರಿಚಕ್ರ ವಾಹನಗಳು (ಆಟೋ ರಿಕ್ಷಾ & ಗೂಡ್ಸ್ ವಾಹನಗಳು ಸೇರಿ) ಜಾತ್ರೆಗಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವುದನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಜಾತ್ರೆಯ ಸಿದ್ಧತೆ: ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ಕಾವೇರಿ ನದಿ ದಾಟಿ ಪಾದಯಾತ್ರೆ ಬರುವ ಬಸವನಕಡ ಪ್ರದೇಶಕ್ಕೆ ಜಿಲ್ಲಾಧಿಕಾರಿ ಶ್ರೀರೂಪ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆಬ್ರವರಿ 14ರಿಂದ 18ರವರೆಗೆ ನಡೆಯಲಿರುವ ಜಾತ್ರೆಗೆ ಕರ್ನಾಟಕ ಮತ್ತು ತಮಿಳುನಾಡಿನಿಂದ ಲಕ್ಷಾಂತರ ಭಕ್ತರು ಪಾದಯಾತ್ರೆಯ ಮೂಲಕ ಆಗಮಿಸುವುದರಿಂದ, ಕನಕಪುರ–ರಾಮನಗರ–ಚನ್ನಪಟ್ಟಣ–ಮಾಗಡಿ ಪ್ರದೇಶಗಳಿಂದ ಕಾವೇರಿ ನದಿ ಸಂಗಮದ ಮೂಲಕ ಬಸವನಕಡ ತಲುಪಿ ಅರಣ್ಯ ಮಾರ್ಗವಾಗಿ ಎಲ್ಲೇಮಾಳ–ಶಾಗ್ಯ–ಹಲಗಾಪುರ–ತೋಮಿಯಾರ್ ಪಾಳ್ಯ–ಡಿ.ಎಮ್. ಸಮುದ್ರ ಮಾರ್ಗವಾಗಿ ಶ್ರೀ ಕ್ಷೇತ್ರಕ್ಕೆ ತೆರಳುವ ಈ ಸಾಂಪ್ರದಾಯಿಕ ಮಾರ್ಗದ ಸುರಕ್ಷತೆ ಮತ್ತು ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು.

ಕೆ.ಆರ್.ಎಸ್ ಜಲಾಶಯದಿಂದ ನೀರಿನ ಪ್ರಮಾಣ ಕಡಿತಗೊಂಡಿರುವ ಹಿನ್ನೆಲೆಯಲ್ಲಿ, ಕಾವೇರಿ ನದಿಯನ್ನು ದಾಟುವ ಸ್ಥಳದಲ್ಲಿ ಭಕ್ತರ ಸುರಕ್ಷತೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಲು ಸೂಚಿಸಲಾಗಿದೆ. ಅರಣ್ಯ ಪ್ರದೇಶದಲ್ಲಿ ಪಾದಯಾತ್ರೆ ಮಾಡುವ ಭಕ್ತರಿಗಾಗಿ ಅರಣ್ಯ ಇಲಾಖೆ ಹೆಚ್ಚಿನ ಪೆಟ್ರೋಲಿಂಗ್ ತಂಡ ನಿಯೋಜನೆ ಮಾಡಲು ತಿಳಿಸಲಾಗಿದೆ.

ಗ್ರಾಮ ಪಂಚಾಯಿತಿ ವತಿಯಿಂದ ಶುದ್ಧ ಕುಡಿಯುವ ನೀರು, ಬೆಳಕು ಮತ್ತು ಮೂಲಭೂತ ಸೌಲಭ್ಯಗಳ ವ್ಯವಸ್ಥೆ ಮಾಡಲಾಗುತ್ತಿದೆ. ಎಸ್‌ಟಿಆರ್‌ಎಫ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳನ್ನು ಮುಂಜಾಗ್ರತ ಕ್ರಮವಾಗಿ ನಿಯೋಜಿಸಲಾಗುತ್ತದೆ.

ಪಾದಯಾತ್ರಿಕರು ಬೆಳಕು ಇರುವ ಸಮಯದಲ್ಲಷ್ಟೇ ಅರಣ್ಯ ಪ್ರದೇಶದಲ್ಲಿ ಸಂಚರಿಸಲು ವಿನಂತಿಸಲಾಗಿದೆ. ಪಾದಯಾತ್ರೆಯ ಮಾರ್ಗದಲ್ಲಿ ಆರೋಗ್ಯ ಇಲಾಖೆಯ ತುರ್ತು ಚಿಕಿತ್ಸಾ ಕೇಂದ್ರಗಳು, ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳ ನಿಯೋಜನೆ ಮಾಡಲಾಗುತ್ತಿದೆ.

ಲಕ್ಷಾಂತರ ಭಕ್ತರು ಆಗಮಿಸುವ ಸಾಧ್ಯತೆ ಇದೆ. ಪಾದಯಾತ್ರಿಕರ ಆಚಾರ–ವಿಚಾರಗಳಿಗೆ ಧಕ್ಕೆಯಾಗದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಭಕ್ತಾದಿಗಳು ಕೂಡ ಜಿಲ್ಲಾಡಳಿತ, ಪೋಲಿಸ್ ಇಲಾಖೆ ಹಾಗೂ ಅರಣ್ಯ ಇಲಾಖೆಗೆ ಸಹಕರಿಸಬೇಕು ಎಂದು ಕರೆ ನೀಡಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular