ಒಂದೇ ತಿಂಗಳಲ್ಲಿ ಮಲೆ ಮಹದೇಶ್ವರ ಹುಂಡಿಯಲ್ಲಿ 2.58 ಕೋಟಿ ಹಣ ಸಂಗ್ರಹ

ಚಾಮರಾಜನಗರ: ರಾಜ್ಯದ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಹುಂಡಿ ಎಣಿಕೆ ಕಾರ್ಯ ಮುಗಿದಿದ್ದು, ಒಂದೇ ತಿಂಗಳಲ್ಲಿ ಬರೋಬ್ಬರಿ 2.58 ಕೋಟಿ ಹಣ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲುಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಮಾದಪ್ಪ ಸ್ವಾಮಿ ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆಸಲಾಗಿದ್ದು, ಈ ಬಾರಿ 2 ಕೋಟಿ 58 ಲಕ್ಷ ರೂಪಾಯಿಗೂ ಹೆಚ್ಚು ಕಾಣಿಕೆ ಸಂಗ್ರಹವಾಗಿದೆ.

ಮಲೆಮಹದೇಶ್ವರ ಬೆಟ್ಟದ ವಾಣಿಜ್ಯ ಸಂಕೀರ್ಣದಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್‌ ಭದ್ರತೆಯಲ್ಲಿ ಮಹದೇಶ್ವರ ಬೆಟ್ಟದ ಹುಂಡಿಗಳನ್ನು ತೆರೆದು ಎಣಿಕೆ ಮಾಡಲಾಗಿತ್ತು. ಕಳೆದ 30 ದಿನಗಳಲ್ಲಿ ಮಹದೇಶ್ವರನಿಗೆ ನಗದು ರೂಪದಲ್ಲಿ ಒಟ್ಟು 2,58,44,097 ರೂಪಾಯಿ ಕಾಣಿಕೆ ಬಂದಿದೆ. 93 ಗ್ರಾಂ ಚಿನ್ನ, 3 ಕೆಜಿ 350 ಗ್ರಾಂ ಬೆಳ್ಳಿ ಬಂದಿದೆ. ಇದೇ ವೇಳೆ ಹುಂಡಿಯಲ್ಲಿ ಸೌದಿ ಅರೇಬಿಯಾ, ಜಪಾನ್, ನೇಪಾಳ ಹಾಗೂ ಕತಾರ್ ದೇಶದ ನಾಲ್ಕು ಕರೆನ್ಸಿ ನೋಟುಗಳು ಸಹ ಹುಂಡಿಯಲ್ಲಿ ಪತ್ತೆಯಾಗಿದೆ. ಅಲ್ಲದೇ ಚಲಾವಣೆಯಲ್ಲಿ ಇಲ್ಲದ 2000 ರೂ. ಮುಖಬೆಲೆಯ 25 ನೋಟುಗಳು ಸಹ ಪತ್ತೆಯಾಗಿವೆ.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಿಂದಾಗಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭವಾದ ಬೆನ್ನಲ್ಲೇ ದೇವಾಲಯಗಳಿಗೆ ಭೇಟಿ ನೀಡುವ ಮಹಿಳೆಯರ ಸಂಖ್ಯೆ ಹೆಚ್ಚಿದ್ದು, ರಾಜ್ಯದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಸಂಗ್ರಹ ಕೂಡ ಸಹಜವಾಗಿ ಹೆಚ್ಚುತ್ತಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read