ಚಾಮರಾಜನಗರ: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಮಲೈ ಮಹಾದೇಶ್ವರ ಬೆಟ್ಟದಲ್ಲಿ ಜಾತ್ರಾ ಮಹೋಸವ ನಡೆಯಲಿದ್ದು, ಲಕ್ಷಾಂತರ ಭಕ್ತರು ಮಹದೇಶ್ವರನ ದರ್ಶನಕ್ಕೆ ಆಗಮಿಸುತ್ತಾರೆ. ವಾಹನ ದಟ್ಟಣೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಿಲ್ಲಾಡಳಿತ ಐದು ದಿನಗಳ ಕಾಲ ಖಾಸಗಿ ವಾಹನಗಳಿಗೆ ಪ್ರವೇಶ ನಿಷೇಧಿಸಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೈ ಮಹದೇಶ್ವರ ಬೆಟ್ಟಕ್ಕೆ ಫೆ.25ರಿಂದ ಮಾರ್ಚ್ 1ರವರೆಗೆ ಐದು ದಿನಗಳ ಕಾಲ ದ್ವಿಚಕ್ರ ವಾಹನ, ಆಟೋ, ಗೂಡ್ಸ್ ವಾಹನ, ಕಾರುಗಳ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.
ಎಲ್ಲಾ ವಾಹನಗಳು ಕೌಡಳ್ಳಿ ಬಳಿ ನಿಲುಗಡೆಗೆ ಸೂಚಿಸಲಾಗಿದೆ. ಶುಇವರತರಿ ಹಿನ್ನೆಲೆಯಲ್ಲಿ ಮಲೈ ಮಹದೇಶ್ವರ್ ಬೆಟ್ಟದಲ್ಲಿ ಜಾತ್ರಾ ಮಹೋತ್ಸವ ನಡೆಯುವುದರಿಂದ ಲಕ್ಷಾಂತರ ಭಕ್ತರು ಬೆಟ್ಟಕ್ಕೆ ಬರುತ್ತಾರೆ. ಇದರಿಂದಾಗಿ ವಾಹನ್ ದಟ್ಟಣೆ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.
ಮಲೈ ಮಹದೇಶ್ವರ ಬೆಟದಲ್ಲಿ ಇಂದಿನಿಂದಲೇ ಶಿವರಾತ್ರಿ ಜಾತ್ರೆ ಆರಂಭವಾಗಿದೆ. ನಾಳೆ ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಮಹದೇಶ್ವರನಿಗೆ ಎಣ್ಣೆ ಮಜ್ಜನ ಸೇವೆ ನಡೆಯಲಿದೆ, ರಾತ್ರಿಯಿಡಿ ಜಾಗರಣೆ, ಉತ್ಸವ, ವಿಶೇಷ ಅಭಿಷೇಕ, ಪೂಜೆ ನಡೆಯಲಿದೆ. ಫೆ.27ರಂದು ವಿಶೇಷ ಸೇವೆ, ಉತ್ಸವಗಳು ನಡೆಯಲಿದೆ ಫೆ.28ರಂದು ಅಮವಾಸ್ಯೆ ಪೂಜೆ, ಮಾರ್ಹ್ 1ರಂದು ರಥೋತ್ಸವ ನಡೆಯಲಿದೆ.