HomeBusinessಮದ್ಯಪ್ರಿಯರಿಗೆ ಭರ್ಜರಿ ಸುದ್ದಿ: ರಾಜ್ಯಾದ್ಯಂತ ಸೂಪರ್ ಮಾರ್ಕೆಟ್, ಮಾಲ್ ಗಳಲ್ಲೂ ಮದ್ಯ ಮಾರಾಟಕ್ಕೆ ಚಿಂತನೆ

ಮದ್ಯಪ್ರಿಯರಿಗೆ ಭರ್ಜರಿ ಸುದ್ದಿ: ರಾಜ್ಯಾದ್ಯಂತ ಸೂಪರ್ ಮಾರ್ಕೆಟ್, ಮಾಲ್ ಗಳಲ್ಲೂ ಮದ್ಯ ಮಾರಾಟಕ್ಕೆ ಚಿಂತನೆ

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿ ಮಾಡಿ ಆರ್ಥಿಕ ಹೊರೆಯಾಗಿರುವುದರಿಂದ ಆದಾಯ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಅಬಕಾರಿ ಮೂಲದಿಂದ ಹೆಚ್ಚಿನ ಆದಾಯ ಗಳಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಮಾಲ್ ಗಳು, ಸೂಪರ್ ಮಾರ್ಕೆಟ್ ಗಳಲ್ಲಿಯೂ ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳನ್ನು ತೆರೆಯಲು ಪರವಾನಿಗೆ ನೀಡಲು ಚಿಂತನೆ ನಡೆಸಿದೆ.

ಸನ್ನದು ಶುಲ್ಕ ಹೆಚ್ಚಳ, ಹೊಸ ಸಣ್ಣದು ನೀಡುವುದು ಸೇರಿದಂತೆ ಹಲವು ಕ್ರಮಗಳ ಮೂಲಕ ಅಬಕಾರಿ ಇಲಾಖೆ ಆದಾಯ ವೃದ್ಧಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಇಲಾಖಾ ಮಟ್ಟದಲ್ಲಿ ಈ ಕುರಿತಾಗಿ ಪ್ರಾಥಮಿಕ ಹಂತದ ಚರ್ಚೆ ನಡೆಸಲಾಗಿದೆ. ಹೊಸ ಪಬ್ ಗಳಿಗೆ ಲೈಸೆನ್ಸ್ ನೀಡಲು ಚಿಂತನೆ ನಡೆಸಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಜೆಟ್ ನಲ್ಲಿ ಅಬಕಾರಿ ಇಲಾಖೆ 36,000 ಕೋಟಿ ಆದಾಯ ಸಂಗ್ರಹ ಗುರಿ ಹೊಂದಿದ್ದು, ಹೆಚ್ಚುವರಿ 4,000 ಕೋಟಿ ರೂಪಾಯಿ ಆದಾಯ ನಿರೀಕ್ಷಿಸಲಾಗಿದೆ. ಆದಾಯ ವೃದ್ಧಿಗಾಗಿ ಪ್ಲಾನ್ ಮಾಡಿಕೊಳ್ಳಲಾಗಿದ್ದು, ಮಾಲ್ ಗಳು, ಸೂಪರ್ ಮಾರ್ಕೆಟ್ ಗಳಲ್ಲಿಯೂ ಮದ್ಯ ಮಾರಾಟಕ್ಕೆ ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular