HomeIndiaವಕ್ಫ್ ಭೂಮಿ ಕಬಳಿಕೆ ಸಾಬೀತಾದರೇ ರಾಜೀನಾಮೆ ನೀಡುವುದಾಗಿ ಮಲ್ಲಿಕಾರ್ಜುನ ಖರ್ಗೆ ಸವಾಲ್: ಆರೋಪಿಸಿದ ಅನುರಾಗ್ ಠಾಕೂರ್...

ವಕ್ಫ್ ಭೂಮಿ ಕಬಳಿಕೆ ಸಾಬೀತಾದರೇ ರಾಜೀನಾಮೆ ನೀಡುವುದಾಗಿ ಮಲ್ಲಿಕಾರ್ಜುನ ಖರ್ಗೆ ಸವಾಲ್: ಆರೋಪಿಸಿದ ಅನುರಾಗ್ ಠಾಕೂರ್ ಕ್ಷಮೆಗೆ ಆಗ್ರಹ

ನವದೆಹಲಿ: ವಕ್ಪ್ ಭೂಮಿ ಕಬಳಿಕೆ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿರುವ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಕ್ಷಮೆ ಕೇಳಬೇಕು ಎಂದು ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ಆಗ್ರಹಿಸಿದ್ದಾರೆ.

ಗುರುವಾರ ವಕ್ಪ್ ವಿಧೇಯಕ ಮಂಡನೆಗೆ ಮುನ್ನ ಅನುರಾಗ್ ಠಾಕೂರ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮಲ್ಲಿಕಾರ್ಜುನ ಖರ್ಗೆ, ಇಂತಹ ರಾಜಕೀಯ ದಾಳಿಗಳಿಗೆ ನಾನು ಬೆದರುವ ಮಾತೇ ಇಲ್ಲ. ನನ್ನ ಜೀವನ ತೆರೆದ ಪುಸ್ತಕ. ಜೀವನದಲ್ಲಿ ಕಷ್ಟ ಮತ್ತು ಹೋರಾಟವಿದೆ. ಸಾರ್ವಜನಿಕ ಜೀವನದಲ್ಲಿ ಉನ್ನತ ಮೌಲ್ಯ ಕಾಪಾಡಿಕೊಂಡು ಬಂದಿದ್ದೇನೆ. 60 ವರ್ಷ ರಾಜಕೀಯದಲ್ಲಿ ಇದನ್ನು ಬಯಸಿರಲಿಲ್ಲ. ಇಂತಹ ಆಧಾರ ರಹಿತ ಆರೋಪ ನಿರೀಕ್ಷಿಸಲಿಲ್ಲ ಎಂದು ಹೇಳಿದ್ದಾರೆ.

ನಾನು ಕಾರ್ಮಿಕನ ಮಗ, ಕಾರ್ಮಿಕ ನಾಯಕ, ಅಲ್ಲಿಂದ ಕಾಂಗ್ರೆಸ್ ಅಧ್ಯಕ್ಷನಾಗಿದ್ದೇನೆ. ನಾನು ಒಂದಿಂಚು ಭೂಮಿಯನ್ನು ಕಬಳಿಸಿಲ್ಲ. ನನ್ನ ಬಗ್ಗೆ ಆರೋಪ ಮಾಡಿದ ಅನುರಾಗ್ ಠಾಕೂರ್ ಕ್ಷಮೆ ಕೇಳಲೇಬೇಕು ಎಂದು ಆಗ್ರಹಿಸಿದ್ದಾರೆ. ಅನುರಾಗ್ ಠಾಕೂರ್ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಾಗದಿದ್ದರೆ ಅವರು ರಾಜೀನಾಮೆ ನೀಡಬೇಕು. ಆರೋಪ ಸಾಬೀತುಪಡಿಸಿದಲ್ಲಿ ನಾನು ರಾಜೀನಾಮೆ ನೀಡುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಸವಾಲು ಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂತರ ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನಕರ್ ಈ ಚರ್ಚೆಯನ್ನು ಶಿಸ್ತು ಸಮಿತಿಯ ಪರಿಶೀಲನೆಗೆ ಒಪ್ಪಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular